ವಿದ್ಯಾರ್ಥಿನಿ ಜೊತೆ ಅಸಭ್ಯ ವರ್ತನೆ : ಇಬ್ಬರ ಬಂಧನ
ಮಣಿಪಾಲ, ಮಾ.12: ಮಣಿಪಾಲದ ಈಶ್ವರ ನಗರದ ಬಳಿ ಮಾ.12 ರಂದು ನಸುಕಿನ ವೇಳೆ 1.30ರ ಸುಮಾರಿಗೆ ವಿದ್ಯಾರ್ಥಿನಿ ಜೊತೆ ಅಸಭ್ಯವಾಗಿ ವರ್ತಿಸಿದ ಇಬ್ಬರನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ.
ಪರ್ಕಳದ ವಿವೇಕಾನಂದ ಕಾಮತ್ (27) ಮತ್ತು ಪರ್ಕಳ ಮಾರುತಿ ನಗರದ ಧನಂಜಯ (26) ಬಂಧಿತ ಆರೋಪಿಗಳು. ಸ್ಕೂಟರಿನಲ್ಲಿ ಹೋಗುತ್ತಿದ್ದ ಮಣಿಪಾಲ ಕಾಲೇಜಿನ ಓರ್ವ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯನ್ನು ಅಡ್ಡಗಟ್ಟಿ ನಿಲ್ಲಿಸಿದ ಆರೋಪಿಗಳು, ವಿದ್ಯಾರ್ಥಿನಿಯೊಂದಿಗೆ ಅಸಭ್ಯವಾಗಿ ವರ್ತಿಸಿದರೆಂದು ದೂರಲಾಗಿದೆ.
ಈ ವಿಷಯವನ್ನು ವಿದ್ಯಾರ್ಥಿನಿ ಕೂಡಲೇ ರಾತ್ರಿ ಗಸ್ತು ಕರ್ತವ್ಯದಲ್ಲಿದ್ದ ಮಣಿಪಾಲ ಪೊಲಿಸರಿಗೆ ಮಾಹಿತಿ ನೀಡಿದ್ದು, ತಕ್ಷಣ ಕಾರ್ಯ ಪ್ರವೃತ್ತರಾದ ಪೊಲೀಸರು ಆರೋಪಿಗಳನ್ನು ಬಂಧಿಸಿದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ಆರೋಪಿ ತರನ್ನು ನ್ಯಾಯಾ ಲಯಕ್ಕೆ ಹಾಜರುಪಡಿಸಿದ್ದು, ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸ ಲಾಗಿದೆ.ಮಣಿಪಾಲದಲ್ಲಿನ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಹಾಗೂ ಸಾರ್ವಜನಿಕರಿಗೆ ರಾತ್ರಿ ವೇಳೆಯಲ್ಲಿ ತಿರುಗಾಡುವಾಗ ಸ್ವಲ್ಪ ಎಚ್ಚರಿಕೆಯಿಂದ ಇರುವಂತೆ ಮನವಿ ಮಾಡಿರುವ ಎಸ್ಪಿ ವಿಷ್ಣುವರ್ಧನ್, ಇಂತಹ ಕೃತ್ಯವನ್ನು ಎಸಗುವವರ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದೆಂದು ಎಚ್ಚರಿಕೆ ನೀಡಿದ್ದಾರೆ.