ಮೊದಲ ಟ್ವೆಂಟಿ-20: ಭಾರತ ವಿರುದ್ದ ಇಂಗ್ಲೆಂಡ್ ಗೆ 8 ವಿಕೆಟ್ ಜಯ, ಸರಣಿ ಮುನ್ನಡೆ

Update: 2021-03-12 17:01 GMT

ಅಹಮದಾಬಾದ್: ಆರಂಭಿಕ ಆಟಗಾರ ಜೇಸನ್ ರಾಯ್ ಆಕರ್ಷಕ ಬ್ಯಾಟಿಂಗ್ ನೆರವಿನಿಂದ ಇಂಗ್ಲೆಂಡ್ ತಂಡ ಭಾರತ ವಿರುದ್ಧದ ಮೊದಲ ಟ್ವೆಂಟಿ-20 ಅಂತರ್ ರಾಷ್ಟ್ರೀಯ ಪಂದ್ಯವನ್ನು 8 ವಿಕೆಟ್ ಗಳಿಂದ ಗೆದ್ದುಕೊಂಡಿದೆ.

ಗೆಲ್ಲಲು 125 ರನ್ ಗುರಿ ಪಡೆದಿದ್ದ ಇಂಗ್ಲೆಂಡ್ ತಂಡ 15.3 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 130 ರನ್ ಗಳಿಸಿದೆ. ಈ ಗೆಲುವಿನ ಮೂಲಕ ಇಂಗ್ಲೆಂಡ್ 5 ಪಂದ್ಯಗಳ ಟ್ವೆಂಟಿ-20 ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.

ಇಂಗ್ಲೆಂಡ್ ಪರ ರಾಯ್ 49 ರನ್(32 ಎಸೆತ, 4 ಬೌಂಡರಿ, 3 ಸಿಕ್ಸರ್)ಗಳಿಸಿದರು. ಜೋ ಬಟ್ಲರ್ (28), ಜಾನಿ ಬೈರ್ ಸ್ಟೋವ್ (ಔಟಾಗದೆ 26), ಡೇವಿಡ್ ಮಲಾನ್ (24)ಎರಡಂಕೆಯ ಸ್ಕೋರ್ ಗಳಿಸಿದರು.

ಇದಕ್ಕೂ ಮೊದಲು ಬ್ಯಾಟಿಂಗ್ ಗೆ ಆಹ್ವಾನಿಸಲ್ಪಟ್ಟಿದ್ದ ಭಾರತವು ನಿಗದಿತ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 124 ರನ್ ಗಳಿಸಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News