×
Ad

ಮಾ.14: ಸಹಕಾರ ಸ್ಪಂದನ ಜಾಲತಾಣದ ಲೋಕಾರ್ಪಣೆ

Update: 2021-03-12 22:35 IST

ಮಂಗಳೂರು, ಮಾ. 12: ಸಹಕಾರ ಅಧ್ಯಯನ ಮತ್ತು ಅಭಿವೃದ್ಧಿ ಸಂಸ್ಥೆ ‘ಸ್ಪಂದನ’ ಮಂಗಳೂರು ಇದರ ಉದ್ಘಾಟನೆ ಹಾಗೂ ‘ಸಹಕಾರ ಸ್ಪಂದನ’ ಜಾಲತಾಣದ ಲೋಕಾರ್ಪಣೆಯು ಮಾ.14ರಂದು ಬೆಳಗ್ಗೆ 10:30ಕ್ಕೆ ಕೊಡಿಯಾಲ್‌ಬೈಲ್‌ನ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ಮೊಳಹಳ್ಳಿ ಶಿವರಾವ್ ಸಭಾಭವನದಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಉದ್ಘಾಟಿಸಲಿ ದ್ದಾರೆ. ಸಹಕಾರ ಅಧ್ಯಯನ ಮತ್ತು ಅಭಿವೃದ್ಧಿ ಸಂಸ್ಥೆಯ ಅಧ್ಯಕ್ಷ ಹರೀಶ್ ಆಚಾರ್ಯ ಅಧ್ಯಕ್ಷತೆ ವಹಿಸಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News