ದ.ಕ.ಜಿಲ್ಲೆ: 35 ಮಂದಿಗೆ ಕೊರೋನ ಪಾಸಿಟಿವ್
Update: 2021-03-12 23:09 IST
ಮಂಗಳೂರು, ಮಾ.12: ದ.ಕ.ಜಿಲ್ಲೆಯಲ್ಲಿ ಶುಕ್ರವಾರ 35 ಮಂದಿಯಲ್ಲಿ ಕೊರೋನ ಪಾಸಿಟಿವ್ ಧೃಢಪಡುವುದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ 34,465 ಪಾಸಿಟಿವ್ ಪ್ರಕರಣಗಳು ಕಂಡು ಬಂದಿದೆ.
ಶುಕ್ರವಾರ 16 ಮಂದಿ ಚಿಕಿತ್ಸೆ ಪಡೆದು ಬಿಡುಗಡೆಗೊಳ್ಳುವುದರೊಂದಿಗೆ ಈವರೆಗೆ 33,692 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ 5,91,234 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿತ್ತು. ಆ ಪೈಕಿ 5,56,567 ಮಂದಿಯ ವರದಿ ನೆಗೆಟಿವ್ ಬಂದಿದೆ. ಅಲ್ಲದೆ 232 ಸಕ್ರಿಯ ಪ್ರಕರಣವಿದೆ. ಈವರೆಗೆ ಕೊರೋನ ಸೋಂಕಿಗೆ ಜಿಲ್ಲೆಯಲ್ಲಿ 741 ಮಂದಿ ಮೃತಪಟ್ಟಿದ್ದಾರೆ.
ಜಿಲ್ಲೆಯಲ್ಲಿ ಈವರೆಗೆ 36,308 ಮಂದಿಯ ವಿರುದ್ಧ ಮಾಸ್ಕ್ ಉಲ್ಲಂಘಿಸಿದ ಪ್ರಕರಣ ದಾಖಲಿಸಲಾಗಿದ್ದು, 37,37,310 ರೂ. ದಂಡವನ್ನು ವಸೂಲಿ ಮಾಡಲಾಗಿದೆ.