×
Ad

ದ.ಕ. ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಬಿ.ಸದಾನಂದ ಪೂಂಜ ನಿಧನ

Update: 2021-03-13 15:52 IST

ಬಂಟ್ವಾಳ: ದ.ಕ. ಜಿ.ಪಂ. ಮಾಜಿ ಅಧ್ಯಕ್ಷ, ಹಿರಿಯ ಕಾಂಗ್ರೆಸ್ ಮುಂದಾಳು ಬಿ.ಸದಾನಂದ ಪೂಂಜ(80) ಅವರು ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ ನಿಧನ ಹೊಂದಿದರು.

ಸಜೀಪಮೂಡ ಗ್ರಾಮದ ಅಭಿವೃದ್ಧಿಯ ರೂವಾರಿಗಳಾಗಿ ಗುರುತಿಸಿಕೊಂಡಿದ್ದ ಅವರು, ಸಜೀಪ ಮಾಗಣೆಯ ಆಡಳಿತದಾರರಾ ಗಿದ್ದರು. ಕಾಂಗ್ರೆಸ್ ಪಕ್ಷದಲ್ಲಿ ಸಕ್ರೀಯರಾಗಿದ್ದು, ದ.ಕ. ಜಿಲ್ಲಾ ಕಾಂಗ್ರೆಸ್‌ನ ಅಧ್ಯಕ್ಷರಾಗಿಯೂ ಕರ್ತವ್ಯ ನಿರ್ವಹಿಸಿದ್ದರು. ಸುಭಾಷ್‌ನಗರ ಶಾರದೋತ್ಸವ ಸಮಿತಿ, ಸುಭಾಷ್ ಯುವಕ ಮಂಡಲದ ಸ್ಥಾಪಕಾಧ್ಯಕ್ಷರಾಗಿ, ಸಜೀಪಮೂಡದಲ್ಲಿ ಸರಕಾರಿ ಪ.ಪೂ.ಕಾಲೇಜು ಸ್ಥಾಪನೆಗೆ ಪ್ರಮುಖ ಕಾರಣರಾಗಿದ್ದರು.

ತಾಲೂಕು ಬೋರ್ಡ್ ಉಪಾಧ್ಯಕ್ಷರಾಗಿ, ರಾಜ್ಯ ಪರಿಸರ ನಿಯಂತ್ರಣ ಮಂಡಳಿಯ ಸದಸ್ಯರಾಗಿ, ಮಂಡಲ ಹಾಗೂ ಗ್ರಾ.ಪಂ. ಅಧ್ಯಕ್ಷರಾಗಿ, ಈಶ್ವರಮಂಗಲ ದೇವಸ್ಥಾನದ ಅಭಿವೃದ್ಧಿಯ ರೂವಾರಿಗಳಾಗಿ ಹೀಗೆ ಹತ್ತು ಹಲವು ಧಾರ್ಮಿಕ, ಸಾಮಾಜಿಕ ಸಂಘಟನೆಗಳಲ್ಲಿ ಸಕ್ರೀಯರಾಗಿದ್ದರು. ಇಂದು ಸಂಜೆ (ಮಾ.13) ಸಜೀಪಮೂಡ ಸುಭಾಷ್‌ನಗರದಲ್ಲಿರುವ ಅವರ ಮನೆ ಶಾಂತಿ ನಿಕೇತನದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಅವರ ಪುತ್ರ ದೇವಿಪ್ರಸಾದ್ ಪೂಂಜ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News