ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆಗೆ ಕೇಂದ್ರದಿಂದ ಯಾವುದೇ ಸೂಚನೆ ಬಂದಿಲ್ಲ : ನಳಿನ್ ಕುಮಾರ್ ಕಟೀಲು
Update: 2021-03-13 18:53 IST
ಕೋಟ, ಮಾ.13: ‘ನಮಗೆ ಕೇಂದ್ರದಿಂದ ಯಾವುದೇ ಸೂಚನೆ ಬಂದಿಲ್ಲ. ನಾವು ಉಪ ಚುನಾವಣೆಯ ತಯಾರಿಯಲ್ಲಿದ್ದೇವೆ. ನಮ್ಮ ಗುರಿ ಮುಂದಿನ ಉಪಚುನಾವಣೆಯನ್ನು ಗೆಲ್ಲುವುದಷ್ಟೇ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ದಕ್ಷಿಣ ಕನ್ನಡದ ಸಂಸತ್ ಸದಸ್ಯ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷರಾಗಿ ನಳಿನ್ ಕುಮಾರ್ ಕಟೀಲ್ ಮತ್ತವರ ತಂಡದ ಸಾಧನೆ ನಿರೀಕ್ಷಿತ ಮಟ್ಟದಲ್ಲಿಲ್ಲದ ಕಾರಣ ರಾಜ್ಯಾಧ್ಯಕ್ಷರೂ ಸೇರಿದಂತೆ ರಾಜ್ಯ ಪದಾಧಿಕಾರಿಗಳ ಬದಲಾವಣೆಗೆ ಬಿಜೆಪಿ ಹೈಕಮಾಂಡ್ ಚಿಂತನೆ ನಡೆಸುತ್ತಿದೆ ಎಂಬ ವರದಿಗಳ ಕುರಿತು ಅವರ ಪ್ರತಿಕ್ರಿಯೆ ಕೇಳಿದಾಗ ಮೊದಲು ಉತ್ತರಿಸಲು ನಿರಾಕರಿಸಿದ ಕಟೀಲ್, ಬಳಿಕ ಮೇಲಿನ ಉತ್ತರ ನೀಡಿದರು.
ಕೋಟ ವಿವೇಕ ವಿದ್ಯಾಸಂಸ್ಥೆ ಆವರಣದಲ್ಲಿ ನಡೆದ ಉಡುಪಿ-ದಕ್ಷಿಣ ಕನ್ನಡ ಜಿಲ್ಲೆಯ ಸ್ಥಳೀಯಾಡಳಿತ ಸಂಸ್ಥೆಗಳ ಜನಪ್ರತಿನಿಧಿಗಳ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆ ‘ಹೊಳಪು-2021’ರ ಉದ್ಘಾಟನಾ ಸಮಾರಂಭದಲ್ಲಿ ಅವರು ಭಾಗವಹಿಸಿದರು.