×
Ad

ರಾತ್ರಿ ಕರ್ಫ್ಯೂ ಹೇರುವ ಬಗ್ಗೆ ಯಾವುದೇ ಚರ್ಚೆ ನಡೆಸಿಲ್ಲ: ಗೃಹ ಸಚಿವ ಬೊಮ್ಮಾಯಿ

Update: 2021-03-14 14:26 IST

ಬೆಂಗಳೂರು, ಮಾ. 14: ‘ರಾಜ್ಯದಲ್ಲಿ ಕೋವಿಡ್ 19 ಎರಡನೇ ಅಲೆ ಆತಂಕ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲೂ ರಾತ್ರಿ ಕರ್ಫ್ಯೂ ಹೇರುವ ಬಗ್ಗೆ ಇದುವರೆಗೂ ಯಾವುದೇ ಚರ್ಚೆ ನಡೆದಿಲ್ಲ' ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಇಂದಿಲ್ಲಿ ಸ್ಪಷ್ಟನೆ ನೀಡಿದ್ದಾರೆ.

ರವಿವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸೋಮವಾರ(ಮಾ.15) ಕೋವಿಡ್ ಎರಡನೇ ಅಲೆ ನಿಯಂತ್ರಿಸುವ ನಿಟ್ಟಿನಲ್ಲಿ ಹಿರಿಯ ಅಧಿಕಾರಿಗಳು ಹಾಗೂ ತಜ್ಞರ ಜೊತೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚರ್ಚೆ ನಡೆಸಲಿದ್ದಾರೆ. ಆದರೆ, ನೈಟ್ ಕರ್ಫ್ಯೂ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ ಎಂದು ಸ್ಪಷ್ಟಪಡಿಸಿದರು.

ಇನ್ನು ಸಿ.ಡಿ. ಪ್ರಕರಣ ಸಂಬಂಧ ನಾಳೆ ಸದನದಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯನವರು ಏನು ಬೇಕಾದರೂ ಮಾತನಾಡಲಿ. ಅದಕ್ಕೆ ಸರಕಾರ ಉತ್ತರ ನೀಡಲಿದೆ. ಪ್ರಕರಣದ ತನಿಖೆ ಪ್ರಗತಿಯಲ್ಲಿದೆ ಎಂದು ಸ್ಪಷ್ಟಪಡಿಸಿದ ಅವರು, ಸಿಡಿ ಪ್ರಕರಣದ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರೇ ವಿವರಣೆ ನೀಡಬೇಕು ಎಂದು ಆಗ್ರಹಿಸಿದರು.

ಸಿ.ಡಿ. ಪ್ರಕರಣ ಸಂಬಂಧ ಯುವತಿಯ ವಿಡಿಯೋ ಹೇಳಿಕೆ ಹಿನ್ನೆಲೆಯಲ್ಲಿ ಅವರಿಗೆ ಹಾಗೂ ಅವರ ಕುಟುಂಬಕ್ಕೆ ಸೂಕ್ತ ಭದ್ರತೆ ನೀಡಲು ಈಗಾಗಲೇ ನಾನು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಸಿಡಿ ಪ್ರಕರಣದ ತನಿಖೆಯನ್ನು ಎಸ್‍ಐಟಿ ಪರಿಶೀಲನೆ ಕಾರ್ಯ ಮುಂದುವರಿಸಿದೆ. ತನಿಖಾ ಹಂತದಲ್ಲಿ ಹೆಚ್ಚಿನ ಪ್ರತಿಕ್ರಿಯೆ ಸರಿಯಲ್ಲ ಎಂದು ಸ್ಪಷ್ಟಪಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News