ರಾಜ್ಯದಲ್ಲಿ ಬಿಸಿಲಿನ ಬೇಗೆ ಪ್ರಾರಂಭ: ಮೇ ಅಂತ್ಯದವರೆಗೆ ತಾಪಮಾನದಲ್ಲಿ ಹೆಚ್ಚಳ
Update: 2021-03-14 18:28 IST
ಬೆಂಗಳೂರು, ಮಾ.14: ರಾಜ್ಯದಲ್ಲಿ ಬಿಸಿಲಿನ ಬೇಗೆ ಪ್ರಾರಂಭವಾಗಿದ್ದು, ಮೇ ಅಂತ್ಯದವರೆಗೂ ತಾಪಮಾನ ಹೆಚ್ಚಾಗಲಿದೆ. ರವಿವಾರ ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ಕನಿಷ್ಠ ಉಷ್ಣಾಂಶ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು.
ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ 37 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು. ಬಾಗಲಕೋಟೆಯಲ್ಲಿ ಗರಿಷ್ಠ ಉಷ್ಣಾಂಶ 37 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು.
ಬಳ್ಳಾರಿಯಲ್ಲಿ ಗರಿಷ್ಠ ಉಷ್ಣಾಂಶ 37 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು.