ಬಿಜೆಪಿ ಅವಧಿಯಲ್ಲಿ ಜನಪರ ಕೆಲಸಕ್ಕೆ ಅವಕಾಶವಿಲ್ಲ: ಸಿದ್ದರಾಮಯ್ಯ ಟೀಕೆ
ಬೆಂಗಳೂರು, ಮಾ. 14: ಬಿಜೆಪಿ ಸರಕಾರದ ಅವಧಿಯಲ್ಲಿ ರಾಜ್ಯದಲ್ಲಿ ಯಾವುದೇ ಜನಪರ ಕೆಲಸ-ಕಾರ್ಯಗಳಿಗೆ ಅವಕಾಶವೇ ಇರುವುದಿಲ್ಲವೆಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ.
ರವಿವಾರ ಕರ್ನಾಟಕ ಪ್ರದೇಶ ಕುರುಬರ ಸಂಘದಲ್ಲಿ ಹಮ್ಮಿಕೊಂಡಿದ್ದ 2020-21ನೇ ಸಾಲಿನ ವೈದ್ಯಕೀಯ ವಿದ್ಯಾರ್ಥಿಗಳ ಅಭಿನಂದನಾ ಸಮಾರಂಭದಲ್ಲಿ ಉದ್ಘಾಟಿಸಿ ಮಾತನಾಡಿದ ಅವರು, ಬಿಜೆಪಿ ಸರಕಾರ ಪ್ರತಿಯೊಂದು ಕೆಲಸಕ್ಕೂ ಆರ್ಥಿಕ ಮುಗ್ಗಟ್ಟಿನ ನೆಪ ಇರುತ್ತದೆ. ಇದರಿಂದ ಜನತೆ ನಿರಾಶರಾಗಿದ್ದರೆಂದು ತಿಳಿಸಿದ್ದಾರೆ.
ಕುರುಬ ಸಮುದಾಯದ ವಿದ್ಯಾರ್ಥಿಗಳು ವೈದ್ಯಕೀಯ ಕೋರ್ಸ್ ಗಳಿಗೆ ಸೇರ್ಪಡೆಯಾಗಿರುವುದು ಒಳ್ಳೆಯ ವಿಚಾರ. ಜನತೆ ವೈದ್ಯರ ಮೇಲೆ ಅಪಾರ ವಿಶ್ವಾಸ ಹೊಂದಿರುತ್ತಾರೆ. ಅವರ ವಿಶ್ವಾಸಕ್ಕೆ ಧಕ್ಕೆ ಆಗದಂತೆ ನಡೆದುಕೊಳ್ಳಬೇಕು. ಮತ್ತಷ್ಟು ವಿದ್ಯಾರ್ಥಿಗಳು ಉನ್ನತ ವಿದ್ಯಾಭ್ಯಾಸದತ್ತ ಮುಖ ಮಾಡಬೇಕೆಂದು ಅವರು ತಿಳಿಸಿದ್ದಾರೆ.
ಕಾರ್ಯಕ್ರಮದಲ್ಲಿ ಕಲಬುರಗಿ ತಿಂಥಣಿ ಬ್ರಿಡ್ಜ್ ನ ಸಿದ್ಧರಾಮಾನಂದಪುರಿ, ಬೆಂಗಳೂರಿನ ರಾಮೋಹಳ್ಳಿ ರಾಮಕೃಷ್ಣ ಯೋಗಾಶ್ರಮದ ಯೋಗಾಶ್ವರಾನಂದನಾಥ ಸ್ವಾಮೀಜಿ, ಡಾ.ಎಂ.ನಾಗರಾಜ್, ಕೆ.ಎಂ.ರಾಮಚಂದ್ರಪ್ಪ ಸೇರಿದಂತೆ ಮತ್ತಿತರರಿದ್ದರು.