ದ.ಕ.: ರವಿವಾರ 40 ಮಂದಿಗೆ ಕೊರೋನ ಸೋಂಕು ದೃಢ
Update: 2021-03-14 20:53 IST
ಮಂಗಳೂರು, ಮಾ.14: ದ.ಕ. ಜಿಲ್ಲೆಯಲ್ಲಿ ಕೊರೋನ ಸೋಂಕಿನ ಪ್ರಕರಣದಲ್ಲಿ ಮತ್ತೇ ಏರುಗತಿಯಲ್ಲಿದ್ದು, ರವಿವಾರ 40 ಮಂದಿಗೆ ಸೋಂಕು ತಗುಲಿದೆ. ಈ ನಡುವೆ 31 ಮಂದಿ ಕೊರೋನದಿಂದ ಮುಕ್ತರಾಗಿದ್ದಾರೆ.
ಜಿಲ್ಲೆಯಲ್ಲಿನ 34,748 ಸೋಂಕಿತರ ಪೈಕಿ 33,748 ಮಂದಿ ಕೊರೋನದಿಂದ ಮುಕ್ತರಾಗಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್‌ಗೆ 741 ಮಂದಿ ಮೃತಪಟ್ಟಿದ್ದಾರೆ. ಜಿಲ್ಲೆಯ ವಿವಿಧ ಆಸ್ಪತ್ರೆಗಳು ಹಾಗೂ ಮನೆಗಳಲ್ಲಿ 259 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾಡಳಿತದ ಪ್ರಕಟನೆ ತಿಳಿಸಿದೆ.