×
Ad

ಪ್ರತ್ಯೇಕ ಪ್ರಕರಣ: ನಾಲ್ವರ ಆತ್ಮಹತ್ಯೆ

Update: 2021-03-14 21:27 IST

ಕುಂದಾಪುರ, ಮಾ.14: ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ಕೊರ್ಗಿ ಗ್ರಾಮದ ತಲಂತಬೆಟ್ಟು ನಿವಾಸಿ ಬೋಜ ಶೆಟ್ಟಿ ಎಂಬವರ ಮಗಳು ಜಯಶೀಲ ಶೆಡ್ತಿ(38) ಎಂಬವರು ಮಾ.13ರಂದು ಬೆಳಗ್ಗೆ ಮನೆಯ ತೋಟದಲ್ಲಿರುವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೆಬ್ರಿ: ಅನಾರೋಗ್ಯ ಹಾಗೂ ವಿಪರೀತ ಮಧ್ಯಪಾನ ಮಾಡುವ ಚಟದಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಹೆಬ್ರಿಯ ಸೇಳಂಜೆ ನಿವಾಸಿ ಶೇಖರ ಶೆಟ್ಟಿ(65) ಎಂಬವರು ಮಾ.13ರಂದು ಮಧ್ಯಾಹ್ನ ಮನೆ ಸಮೀಪದ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗಂಗೊಳ್ಳಿ: ಪತಿಯ ಮರಣದ ಬಳಿಕ ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ಗುಜ್ಜಾಡಿ ಗ್ರಾಮದ ಕೊಡಪಾಡಿ ನಿವಾಸಿ ರತ್ನ(38) ಎಂಬವರು  ಮಾ.13ರಂದು ರಾತ್ರಿ ಮನೆಯ ಅಂಗಳದಲ್ಲಿನ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾಪು: ವಿಪರೀತ ಮದ್ಯಪಾನ ಮಾಡುವ ಚಟ ಹೊಂದಿದ್ದ ಉದ್ಯಾವರ ಅಂಕುದ್ರು ನಿವಾಸಿ ಸಂಜೀವ ಪೂಜಾರಿ (60) ಎಂಬವರು ವೈಯಕ್ತಿಕ ಕಾರಣಕ್ಕೆ ಮನನೊಂದು ಇಂದು ಬೆಳಗ್ಗೆ ಮನೆ ಸಮೀಪದ ಬಾವಿಯ ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News