×
Ad

ಗೀತಾ ಶಿವರಾಜ್ ಕುಮಾರ್ ಕಾಂಗ್ರೆಸ್ 'ಸೇರ್ಪಡೆ' ವಿಚಾರವಾಗಿ ಡಿಕೆಶಿ ಪ್ರತಿಕ್ರಿಯಿಸಿದ್ದು ಹೀಗೆ...

Update: 2021-03-15 13:24 IST

ಬೆಂಗಳೂರು, ಮಾ.15: ಗೀತಾ ಶಿವರಾಜ್ ಕುಮಾರ್ ಅವರು ಕಾಂಗ್ರೆಸ್ ಸೇರುವ ಬಗ್ಗೆ ಕಾದು ನೋಡಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಸೋಮವಾರ ಸದಾಶಿವನಗರದ ತಮ್ಮ ನಿವಾಸದಲ್ಲಿ ನಟ ಶಿವರಾಜ್ ಕುಮಾರ್ ಅವರ ಜತೆ ಸಮಾಲೋಚನೆ ನಡೆಸಿದ ಬಳಿಕ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಅವರು, ‘ಶಿವರಾಜ್ ಕುಮಾರ್ ಅವರು ನಮ್ಮ ಆತ್ಮೀಯರು. ಅವರ ಕುಟುಂಬ ಇಡೀ ದೇಶ ಹಾಗೂ ರಾಜ್ಯದ ಆಸ್ತಿ ಎಂದರು.

ಆ ಕುಟುಂಬದ ಮೇಲೆ ನಮಗೆ ಅಪಾರ ಗೌರವವಿದೆ. ನಮಗೂ ಅವರ ಜತೆ ವೈಯಕ್ತಿಕ ಸಂಬಂಧಗಳಿವೆ. ನಾನು ಆ ಬಗ್ಗೆ ಹೆಚ್ಚು ಹೇಳುವುದಿಲ್ಲ. ಮಧು ಬಂಗಾರಪ್ಪ ಅವರಿಗೆ ಆ ಬಗ್ಗೆ ಮಾತನಾಡುವ ಹಕ್ಕಿದೆ. ಅವರು ಮಾತನಾಡಿದ್ದಾರೆ. ಸಂದರ್ಭ ಬಂದಾಗ ಗೀತಾ ಶಿವರಾಜ್ ಕುಮಾರ್ ಅವರೇ ಮಾತನಾಡುತ್ತಾರೆ ಎಂದು ಅವರು ಹೇಳಿದರು.

ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳಿಗೆ ಉತ್ತರಿಸಿದ ಶಿವಕುಮಾರ್, ‘ಸದನದಲ್ಲಿ ನಮ್ಮ ಶಾಸಕಾಂಗ ಪಕ್ಷದ ನಾಯಕರು ಬಜೆಟ್ ಬಗ್ಗೆ ಮಾತನಾಡಲಿದ್ದಾರೆ. ನಂತರ ಸಂಜೆ ನಾವು ಹಿರಿಯ ನಾಯಕರ ಜತೆ ಚರ್ಚೆ ಮಾಡುತ್ತೇವೆ. ಆನಂತರ ಸಿಡಿ ವಿಚಾರವಾಗಿ ಪ್ರತಿಕ್ರಿಯೆ ನೀಡುತ್ತೇನೆ’ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News