ತೃಣಮೂಲ ಕಾಂಗ್ರೆಸ್ ಉಪಾಧ್ಯಕ್ಷರಾಗಿ ನೇಮಕಗೊಂಡ ಯಶ್ವಂತ್‌ ಸಿನ್ಹಾ

Update: 2021-03-15 10:49 GMT

‌ಕೋಲ್ಕತ್ತ: ತೃಣಮೂಲ ಕಾಂಗ್ರೆಸ್ ಸೇರಿದ ಎರಡು ದಿನಗಳ ನಂತರ ಕೇಂದ್ರದ ಮಾಜಿ ಸಚಿವ ಹಾಗೂ ಹಿರಿಯ ಬಿಜೆಪಿ ನಾಯಕ ಯಶ್ವಂತ್ ಸಿನ್ಹಾ ಅವರನ್ನು ಸೋಮವಾರ ಪಕ್ಷದ ಉಪಾಧ್ಯಕ್ಷರನ್ನಾಗಿ ನೇಮಿಸಲಾಯಿತು ಮತ್ತು ಟಿಎಂಸಿ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯ ಸದಸ್ಯರನ್ನಾಗಿ ನೇಮಕ ಮಾಡಲಾಯಿತು.

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ನೇತೃತ್ವದಲ್ಲಿ ಕ್ಯಾಬಿನೆಟ್ ಸಚಿವರಾಗಿದ್ದ ಯಶ್ವಂತ್ ಸಿನ್ಹಾ  ಶನಿವಾರ ಟಿಎಂಸಿಗೆ ಸೇರಿದರು. ಟಿಎಂಸಿಗೆ ಸೇರಿದ ಬಳಿಕ, ಸಿನ್ಹಾ "ಮಮತಾ ಬ್ಯಾನರ್ಜಿಯ ಮೇಲೆ ನಡೆದಿರುವ ದಾಳಿಯೇ ನನ್ನನ್ನು ಪಕ್ಷಕ್ಕೆ ಸೇರ್ಪಡೆಗೊಳ್ಳುವಂತೆ ಮಾಡಿದೆ" ಎಂದು ಹೇಳಿದರು.

ಟಿಎಂಸಿ ಭವನದಲ್ಲಿ ಶನಿವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಿನ್ಹಾ, "ಈ ಸರ್ಕಾರ (ಬಿಜೆಪಿ) ಚುನಾವಣೆಯಲ್ಲಿ ಗೆಲ್ಲಲು ಏನು ಬೇಕಾದರೂ ಮಾಡಬಹುದು. ಮಮತಾ ಜಿ ಮೇಲಿನ ದಾಳಿಯು ನಾನು ಅವರೊಂದಿಗೆ ಕೆಲಸ ಮಾಡಲು ಬಯಸುತ್ತೇನೆ ಎಂದು ನಿರ್ಧರಿಸಿದೆ" ಎಂದು ಹೇಳಿದರು. ದೇಶದಲ್ಲಿ ಪ್ರಜಾಪ್ರಭುತ್ವವು ಅಪಾಯದಲ್ಲಿದೆ ಎಂದು ಹೇಳಿದ ಅವರು, ಮತದಾನದ ವೇಳೆ ಟಿಎಂಸಿ ಪಕ್ಷವು ಬಹುಮತದಿಂದ ಗೆಲ್ಲುವಂತೆ ನೋಡಿಕೊಳ್ಳುವುದು ಈಗಿನ ಸಮಯದ ಅಗತ್ಯವಾಗಿದೆ ಎಂದು ಅವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News