ಸರಕಾರದ ಸೂಚನೆ ಇಲ್ಲದೆ ತರಗತಿ ನಡೆಸುತ್ತಿರುವ ಶಾಲೆಗಳ ವಿರುದ್ಧ ಕಠಿಣ ಕ್ರಮ: ಸುರೇಶ್ ಕುಮಾರ್

Update: 2021-03-15 12:49 GMT

ಬೆಂಗಳೂರು, ಮಾ.15: ಕೋವಿಡ್ ಹಿನ್ನೆಲೆಯಲ್ಲಿ ಸರಕಾರದ ಸೂಚನೆ ಇಲ್ಲದೇ ಹೋದರೂ 1 ರಿಂದ 5ನೇ ತರಗತಿಗಳನ್ನು ನಡೆಸುತ್ತಿರುವ ಶಾಲೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆಯ ರಾಜ್ಯ ಕೋವಿಡ್-19 ತಾಂತ್ರಿಕ ಸಲಹಾ ಸಮಿತಿಯ ಅನುಮತಿಯೊಂದಿಗೆ 6ನೇ ತರಗತಿಯಿಂದ ಮೇಲ್ಪಟ್ಟ ತರಗತಿಗಳನ್ನು ಮಾತ್ರವೇ ಆರಂಭಿಸಲು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಅನುಮತಿ ನೀಡಿದೆ. ಆದರೆ ರಾಜ್ಯದ ಹಲವೆಡೆ ಕೆಲವು ಖಾಸಗಿ ಶಾಲೆಗಳು 1ರಿಂದ 5ನೇ ತರಗತಿಗಳನ್ನು ಅನಧಿಕೃತವಾಗಿ ನಡೆಸುತ್ತಿರುವ ಕುರಿತು ಮಾಧ್ಯಮ ವರದಿಗಳ ಹಿನ್ನೆಲೆಯಲ್ಲಿ ಇಂತಹ ಶಾಲೆಗಳ ಕುರಿತು ಕ್ರಮ ಕೈಗೊಳ್ಳಬೇಕೆಂದು ಅವರು ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದ್ದಾರೆ.

ತಾಲೂಕು ಮಟ್ಟದಲ್ಲಿ ಪರಿಶೀಲನಾ ತಂಡಗಳನ್ನು ರಚಿಸಿ, ಈ ರೀತಿ ಅನಧಿಕೃತವಾಗಿ 1 ರಿಂದ 5ನೇ ತರಗತಿಗಳನ್ನು ನಡೆಸುತ್ತಿರುವ ಶಾಲೆಗಳ/ಶಿಕ್ಷಣ ಸಂಸ್ಥೆಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಕುರಿತು ಕೂಡಲೇ ಸುತ್ತೋಲೆ ಹೊರಡಿಸಬೇಕೆಂದು ಇಲಾಖೆಯ ಆಯಕ್ತರು ಮತ್ತು ಅಪರ ಆಯುಕ್ತರಿಗೆ ಸುರೇಶ್ ಕುಮಾರ್ ಸೂಚನೆ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News