ಉಡುಪಿ: ಇ-ಸ್ಯಾಂಡ್ ಆ್ಯಪ್ ಮೂಲಕ ಮರಳು ಲಭ್ಯ
ಉಡುಪಿ, ಮಾ.15: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಗುಲ್ವಾಡಿ, ಕಾವ್ರಾಡಿ, ಬಳ್ಕೂರು ಗ್ರಾಮದ ಸರ್ವೆ ನಂ 180, 157, 189ರಲ್ಲಿ ಒಟ್ಟು 11.90 ಎಕರೆ ವಿಸ್ತೀರ್ಣ ಪ್ರದೇಶದ ಮರಳು ಬ್ಲಾಕ್ ಸಂಖ್ಯೆ 4ರಲ್ಲಿ ಹಾಗೂ ಜಪ್ತಿ, ಹಳ್ನಾಡು ಗ್ರಾಮದ ಸರ್ವೆ ನಂ. 174, 56ರಲ್ಲಿ 5.70 ಎಕರೆ ವಿಸ್ತೀರ್ಣ ಪ್ರದೇಶದ ಮರಳು ಬ್ಲಾಕ್ ಸಂಖ್ಯೆ 6ರಲ್ಲಿ ಮರಳನ್ನು ಸಾರ್ವಜನಿಕರಿಗೆ ಅಭಿವೃದ್ಧಿ ಕಾಮಗಾರಿಗಳಿಗೆ ಸ್ಯಾಂಡ್ ಆ್ಯಪ್ ಮೂಲಕ ಪೂರೈಸಲು ಜಿಲ್ಲಾ ಮರಳು ಉಸ್ತುವಾರಿ ಸಮಿತಿಯಲ್ಲಿ ತೀರ್ಮಾನಿಸಲಾಗಿದೆ.
ಆದ್ದರಿಂದ ಈ ಮರಳನ್ನು ಪಡೆದುಕೊಳ್ಳಲು ಇಚ್ಚಿಸುವವವರು ಉಡುಪಿ ಇ-ಸ್ಯಾಂಡ್ ಆ್ಯಪ್ ಮೂಲಕ ಇದನ್ನು ಪಡೆದುಕೊಳ್ಳಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಹಿರಿಯ ಭೂವಿಜ್ಞಾನಿ ಅವರ ಕಛೇರಿ, ಗಣಿ ಮತ್ತು ಭೂವಿಜ್ಞಾನ ಇಲಾಖೆ, ರಜತಾದ್ರಿ, ಎ-ಬ್ಲಾಕ್, ಮೊದಲನೇ ಮಹಡಿ, ಮಣಿಪಾಲ, ಉಡುಪಿ ಜಿಲ್ಲೆ, ಉಡುಪಿ, ದೂರವಾಣಿ ಸಂಖ್ಯೆ: 0820-2572333, ಉಡುಪಿ ಇ-ಸ್ಯಾಂಡ್ ಆ್ಯಪ್ ದೂರವಾಣಿ ಸಂಖ್ಯೆ- 6366248666, 6366743888, 6366871888ನ್ನು ಸಂಪರ್ಕಿಸಬಹುದಾಗಿದೆ ಎಂದು ಹಿರಿಯ ಭೂ ವಿಜ್ಞಾನಿ ಹಾಗೂ ಸದಸ್ಯ ಕಾರ್ಯದರ್ಶಿ, ಜಿಲ್ಲಾ ಮರಳು ಉಸ್ತುವಾರಿ ಸಮಿತಿ, ಉಡುಪಿ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.