×
Ad

ಮಂಗಳೂರು: ಎಂಡೋಪೀಡಿತರಿಗೆ ಆರೋಗ್ಯ ತಪಾಸಣಾ ಶಿಬಿರ

Update: 2021-03-15 22:39 IST

ಮಂಗಳೂರು, ಮಾ.15: ದ.ಕ. ಜಿಲ್ಲಾ ಖಾಸಗಿ ವೈದ್ಯಕೀಯ ಕಾಲೇಜುಗಳ ಸಹಯೋಗದೊಂದಿಗೆ ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ಜಿಲ್ಲೆಯ ಪ್ರತೀ ತಿಂಗಳ ಮೂರನೇ ಮಂಗಳವಾರ, ಬುಧವಾರ ಮತ್ತು ಶನಿವಾರದಂದು ಆರೋಗ್ಯ ಕೇಂದ್ರಗಳಲ್ಲಿ ವಿಶೇಷ ಆರೋಗ್ಯ ತಪಾಸಣಾ ಶಿಬಿರಗಳನ್ನು ಏರ್ಪಡಿಸಲಾಗಿದೆ.

ಮಾ.16ರಂದು ಬೆಳ್ತಂಗಡಿ ತಾಲೂಕಿನ ಕಣಿಯೂರು, ಪುತ್ತೂರು ತಾಲೂಕಿನ ಕೊಯಿಲ ಹಾಗೂ ಉಪ್ಪಿನಂಗಡಿ, ಸುಳ್ಯ ತಾಲೂಕಿನ ಬೆಳ್ಳಾರೆ ಮತ್ತು ಮಾ.17ರಂದು ಬೆಳ್ತಂಗಡಿ ತಾಲೂಕಿನ ಕೊಕ್ಕಡ, ಮಾ.20ರಂದು ಪುತ್ತೂರು ತಾಲೂಕಿನ ಪಾಣಾಜೆ ಆರೋಗ್ಯ ಕೇಂದ್ರಗಳಲ್ಲಿ ವಿಶೇಷ ಆರೋಗ್ಯ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News