ಲಾಭವನ್ನು ಖಾಸಗೀಕರಣಗೊಳಿಸಿ, ನಷ್ಟವನ್ನು ರಾಷ್ಟ್ರೀಕರಣಗೊಳಿಸಲಾಗುತ್ತಿದೆ: ರಾಹುಲ್ ಗಾಂಧಿ ಆಕ್ರೋಶ

Update: 2021-03-16 09:18 GMT

ನವದೆಹಲಿ: ಸಾರ್ವಜನಿಕ ವಲಯದ ಬ್ಯಾಂಕುಗಳನ್ನು "ಗೆಳೆಯರಿಗೆ" ಮಾರಾಟ ಮಾಡುವುದರಿಂದ ದೇಶದ ಆರ್ಥಿಕ ಭದ್ರತೆಗೆ ಧಕ್ಕೆಯುಂಟಾಗುತ್ತದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಇಂದು ಕೇಂದ್ರ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸರ್ಕಾರವು "ಲಾಭವನ್ನು ಖಾಸಗೀಕರಣಗೊಳಿಸುತ್ತಿದೆ ಮತ್ತು ನಷ್ಟವನ್ನು ರಾಷ್ಟ್ರೀಕರಣಗೊಳಿಸುತ್ತಿದೆ" ಎಂದು ಅವರು ಆರೋಪಿಸಿದರು.

"ಭಾರತ ಸರ್ಕಾರ (ಜಿಒಐ) ಲಾಭವನ್ನು ಖಾಸಗೀಕರಣಗೊಳಿಸುತ್ತಿದೆ ಮತ್ತು ನಷ್ಟವನ್ನು ರಾಷ್ಟ್ರೀಕರಣಗೊಳಿಸುತ್ತಿದೆ. ಪಿಎಸ್‌ಬಿಗಳನ್ನು ಮೋದಿಯು ಗೆಳೆಯರಿಗೆ ಮಾರಾಟ ಮಾಡುವುದು ಭಾರತದ ಆರ್ಥಿಕ ಭದ್ರತೆಗೆ ತೀವ್ರವಾಗಿ ಧಕ್ಕೆಯುಂಟುಮಾಡುತ್ತದೆ" ಎಂದು ಗಾಂಧಿ ಟ್ವೀಟ್ ಮಾಡಿದ್ದಾರೆ.

ಸಾರ್ವಜನಿಕ ವಲಯದ ಬ್ಯಾಂಕುಗಳ ಖಾಸಗೀಕರಣದ ವಿರುದ್ಧ ಎರಡು ದಿನಗಳ ಮುಷ್ಕರ ನಡೆಸುತ್ತಿರುವ ಪ್ರತಿಭಟನಾ ನಿರತ ಬ್ಯಾಂಕ್ ನೌಕರರಿಗೂ ಕಾಂಗ್ರೆಸ್ ನಾಯಕ ತಮ್ಮ ಬೆಂಬಲ ವ್ಯಕ್ತಪಡಿಸಿದರು.

"ನಾನು ಮುಷ್ಕರ ನಿರತರಾಗಿರುವ ಬ್ಯಾಂಕ್ ಉದ್ಯೋಗಿಗಳ ಬೆಂಬಲಕ್ಕೆ ನಿಲ್ಲುತ್ತೇನೆ" ಎಂದು ಅವರು ಟ್ವಿಟ್ಟರ್ನಲ್ಲಿ ತಿಳಿಸಿದ್ದಾರೆ.

ದೇಶದ ಒಂಬತ್ತು ಒಕ್ಕೂಟಗಳ ಸಾರ್ವಜನಿಕ ವಲಯದ ಬ್ಯಾಂಕುಗಳ (ಪಿಎಸ್‌ಬಿ) ನೇತೃತ್ವದ ಬ್ಯಾಂಕ್ ಮುಷ್ಕರ ಇಂದು ಎರಡನೇ ದಿನವೂ ಮುಂದುವರೆದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News