ಕೋವಿಡ್-19 ಸೋಂಕಿನಿಂದ ಬಳಲುತ್ತಿದ್ದ ಮಾಜಿ ಕೇಂದ್ರ ಸಚಿವ ದಿಲೀಪ್ ಗಾಂಧಿ ನಿಧನ
Update: 2021-03-17 12:22 IST
ಹೊಸದಿಲ್ಲಿ: ಮಾಜಿ ಕೇಂದ್ರ ಸಚಿವ ಹಾಗೂ ಬಿಜೆಪಿ ನಾಯಕ ದಿಲೀಪ್ ಗಾಂಧಿ ಅವರು ಬುಧವಾರ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
ಕೋವಿಡ್-19 ಸೋಂಕಿನಿಂದ ಬಳಲುತ್ತಿದ್ದ 70 ವರ್ಷದ ದಿಲೀಪ್ ಗಾಂಧಿ ಅವರನ್ನು ದಿಲ್ಲಿಯ ಖಾಸಗಿ ಆಸ್ಪತ್ರಗೆ ಸೇರಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಬುಧವಾರ ಬೆಳಗ್ಗೆ ನಿಧನರಾಗಿದ್ದಾರೆ.
ಮಹಾರಾಷ್ಟ್ರದ ಅಹ್ಮದ್ ನಗರ ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಮೂರು ಬಾರಿ ಗೆದ್ದಿರುವ ಮಾಜಿ ಸಂಸದ ದಿಲೀಪ್ ಗಾಂಧಿ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ನೇತೃತದ ಸರಕಾರದಲ್ಲಿ ರಾಜ್ಯ ಶಿಪ್ಪಿಂಗ್ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.
1980ರಲ್ಲಿ ಕಾರ್ಪೋರೇಟರ್ ಆಗಿ ರಾಜಕೀಯ ಜೀವನ ಆರಂಭಿಸಿದ್ದ ಗಾಂಧಿ, 1999ರಲ್ಲಿ ಮೊದಲ ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು. 2019ರ ಚುನಾವಣೆಯಲ್ಲಿ ಇವರಿಗೆ ಟಿಕೆಟ್ ನಿರಾಕರಿಸಲಾಗಿತ್ತು.