ಮಾ.18 : 'ಬ್ಯಾರಿ ಭಾಷೆ ಮತ್ತು ಸಾಹಿತ್ಯ- ಒಂದು ಅವಲೋಕನ' ಕಾರ್ಯಕ್ರಮ
Update: 2021-03-17 12:31 IST
ಬಂಟ್ವಾಳ : ಮಂಗಳೂರು ವಿಶ್ವವಿದ್ಯಾನಿಲಯದ ಬ್ಯಾರಿ ಅಧ್ಯಯನ ಪೀಠ ಮತ್ತು ಮೆಲ್ಕಾರ್ ಪದವಿ ಕಾಲೇಜಿನ ಜಂಟಿ ಆಶ್ರಯದಲ್ಲಿ ಬ್ಯಾರಿ ಭಾಷೆ ಮತ್ತು ಸಾಹಿತ್ಯ- ಒಂದು ಅವಲೋಕನ ಕಾರ್ಯಕ್ರಮವು ಮೆಲ್ಕಾರ್ ಮಹಿಳಾ ಕಾಲೇಜು ಸಭಾಂಗಣದಲ್ಲಿ ಮಾ.18 ರಂದು ಅಪರಾಹ್ನ 2 ಗಂಟೆಗೆ ಹಮ್ಮಿಕೊಳ್ಳಲಾಗಿದೆ.
ಸಂಪನ್ಮೂಲ ವ್ಯಕ್ತಿಯಾಗಿ ಸಂಶುದ್ದೀನ್ ಮಡಿಕೇರಿ ಭಾಗವಹಿಸಲಿದ್ದಾರೆ. ಕಾಲೇಜಿನ ಪ್ರಾಂಶುಪಾಲರಾದ ಬಿ.ಕೆ ಅಬ್ದುಲ್ ಲತೀಫ್ ಅಧ್ಯಕ್ಷತೆ ವಹಿಸಲಿದ್ದಾರೆ. ಮಂಗಳೂರು ವಿಶ್ವ ವಿದ್ಯಾನಿಲಯ ಬ್ಯಾರಿ ಅಧ್ಯಯನ ಪೀಠದ ಸಂಯೋಜಕ ಡಾ.ಎ.ಸಿದ್ದೀಕ್ ಉಪಸ್ಥಿತರಿರುವರು.