ಕಾಸರಗೋಡು : ಇಬ್ಬರು ಮಕ್ಕಳು ಸೇರಿ ಒಂದೇ ಕುಟುಂಬದ ಮೂವರು ಮೃತ ಸ್ಥಿತಿಯಲ್ಲಿ ಪತ್ತೆ

Update: 2021-03-17 07:10 GMT

ಕಾಸರಗೋಡು : ಇಬ್ಬರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಮೂವರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಚೆರ್ವತ್ತೂರಿನಲ್ಲಿ ನಡೆದಿದೆ.

ಪಿಲಿಕ್ಕೋಡು ಮಡಿವಾಯಿಯ ಆಟೋರಿಕ್ಷಾ ಚಾಲಕ ರೂಪೇಶ್ (37) ಮತ್ತು ಮಕ್ಕಳಾದ ವೈದಹಿ (10) , ಶಿವಾನಂದ (6) ಮೃತಪಟ್ಟವರು. ಅವರ ಮೃತದೇಹ ನಿರ್ಮಾಣ ಹಂತದಲ್ಲಿರುವ ಮನೆಯ ಕೋಣೆಯೊಂದರಲ್ಲಿ ಪತ್ತೆಯಾಗಿವೆ.

ಮಕ್ಕಳಿಬ್ಬರು ವಿಷ ಸೇವನೆಯಿಂದ ಮೃತಪಟ್ಟರೆ ರೂಪೇಶ್  ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ . ಮಕ್ಕಳಿಗೆ ವಿಷ ವುಣಿಸಿ ಬಳಿಕ ಆತ್ಮಹತ್ಯೆಗೈದಿರಬಹುದು ಎಂದು ಶಂಕಿಸಲಾಗಿದೆ.

ರೂಪೇಶ್ ಅವರು ಕಾಞ೦ಗಾಡ್ ನ ಸವಿತಾ ಎಂಬಾಕೆಯನ್ನು ವಿವಾಹವಾಗಿದ್ದರು.  ದಾಂಪತ್ಯದಲ್ಲಿ ವಿರಸ ಮೂಡಿ ಇಬ್ಬರು ಬೇರೆ ಬೇರೆ ವಾಸವಾಗಿದ್ದರು ಎನ್ನಲಾಗಿದೆ . ಇಬ್ಬರು ಮಕ್ಕಳು ತಂದೆ ಜೊತೆ ವಾಸವಾಗಿದ್ದರು . ಕೌಟುಂಬಿಕ ಕಲಹ ಕೃತ್ಯಕ್ಕೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ.

ಚಂದೇರ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ  ತನಿಖೆ ನಡೆಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News