×
Ad

ಕೆಲಸ ಮಾಡುತ್ತಿದ್ದ ಮನೆಯಲ್ಲೇ ಚಿನ್ನಾಭರಣ ಕಳವು ಆರೋಪ: ಮಹಿಳೆ ಸೆರೆ

Update: 2021-03-17 18:22 IST

ಬೆಂಗಳೂರು, ಮಾ.17: ಕೆಲಸ ಮಾಡುತ್ತಿದ್ದ ಮನೆಯಲ್ಲೇ ಚಿನ್ನಾಭರಣ ಕಳವು ಮಾಡಿರುವ ಆರೋಪ ಸಂಬಂಧ ಮಹಿಳೆಯೊಬ್ಬಾಕೆಯನ್ನು ಇಲ್ಲಿನ ರಾಜರಾಜೇಶ್ವರಿ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ರಾಜರಾಜೇಶ್ವರಿ ನಗರದ ಹಲಗೆ ವಡೇರಹಳ್ಳಿ ಆಶಾ(28) ಬಂಧಿತ ಆರೋಪಿಯಾಗಿದ್ದು, ಆಕೆಯಿಂದ 3.10 ಲಕ್ಷ ರೂ. ಮೌಲ್ಯದ 52 ಗ್ರಾಂ ಚಿನ್ನ ಹಾಗೂ ಕಾರನ್ನು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಬಂಧಿತ ಆರೋಪಿಯು ರಾಜರಾಜೇಶ್ವರಿ ನಗರದ ಮನೆಯೊಂದರಲ್ಲಿ ಮನೆಗೆಲಸ ಮಾಡುತ್ತಿದ್ದು, ಮಾಲಕರ ಕಣ್ತಪ್ಪಿಸಿ ಚಿನ್ನಾಭರಣ ಕಳವು ಮಾಡಿದ್ದಳು. ಕಳವು ಮಾಡಿದ ಚಿನ್ನಾಭರಣಗಳನ್ನು ಮಾರಾಟ ಮಾಡಿ, ಕಾರು ಖರೀದಿಸಿದ್ದಳು ಎನ್ನುವ ಮಾಹಿತಿ ತನಿಖೆಯಲ್ಲಿ ಗೊತ್ತಾಗಿದೆ ಎಂದು ಡಿಸಿಪಿ ಸಂಜೀವ್ ಪಾಟೀಲ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News