ವಿದ್ಯೋದಯದಲ್ಲಿ ಉಡುಪಿ ಜಿಲ್ಲಾ ಮಟ್ಟದ ಚೆಸ್ ಸ್ಪರ್ಧೆ
Update: 2021-03-17 19:42 IST
ಉಡುಪಿ : ನಗರದ ವಿದ್ಯೋದಯ ಟ್ರಸ್ಟ್‌ನ ಅಂಗಸಂಸ್ಥೆಯಾದ ವಿದ್ಯೋದಯ ಪ.ಪೂ ಕಾಲೇಜಿನಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ಜಿಲ್ಲಾ ಮಟ್ಟದ ಚದುರಂಗ ಸ್ಪರ್ಧೆ ಮಂಗಳವಾರ ನಡೆಯಿತು.
ಸ್ಪರ್ಧೆಯನ್ನು ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ಎನ್. ನಾಗರಾಜ ಬಲ್ಲಾಳ ಉದ್ಘಾಟಿಸಿದರು. ಜಿಲ್ಲಾ ಕ್ರೀಡಾ ಸಂಯೋಜನಾಧಿಕಾರಿ ದಿನೇಶ್ ಕುಮಾರ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.
ಕಾಲೇಜಿನ ಪ್ರಾಂಶುಪಾಲ ಎ.ಲಕ್ಷ್ಮೀನಾರಾಯಣ ಛಾತ್ರಾ ಸ್ವಾಗತಿಸಿದರು. ನಿಯೋಜಿತ ಪ್ರಾಂಶುಪಾಲ ಸಂದೀಪ್ ಕುಮಾರ್ ಉಪಸ್ಥಿತರಿದ್ದರು. ಉಪನ್ಯಾಸಕ ಶಿವಪ್ರಸಾದ್ ಭಟ್ ನಿರೂಪಿಸಿ, ದೈಹಿಕ ಶಿಕ್ಷಣ ಉಪನ್ಯಾಸಕ ವಿನಯ್ ವಂದಿಸಿದರು.