ದ.ಕ.ಜಿಲ್ಲೆ : 72 ಮಂದಿಗೆ ಕೊರೋನ ಸೋಂಕು
Update: 2021-03-17 20:11 IST
ಮಂಗಳೂರು, ಮಾ.17: ದ.ಕ. ಜಿಲ್ಲೆಯಲ್ಲಿ ಕೊರೋನ ಸೋಂಕು ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಬುಧವಾರ 72 ಮಂದಿಯಲ್ಲಿ ಕೊರೋನ ಪಾಸಿಟಿವ್ ಕಂಡುಬಂದಿದೆ. ಈ ನಡುವೆ 25 ಮಂದಿ ಗುಣಮುಖರಾಗಿದ್ದಾರೆ.
ಕಳೆದ ನಾಲ್ಕೈದು ದಿನಗಳಿಂದ ಕೊರೋನ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದೆ. ಜಿಲ್ಲೆಯಲ್ಲಿ 34,935 ಸೋಂಕಿತರ ಪೈಕಿ 33,816 ಮಂದಿ ಗುಣಮುಖರಾಗಿದ್ದಾರೆ. ಕೋವಿಡ್‌ಗೆ 741 ಮಂದಿ ಮೃತಪಟ್ಟಿದ್ದಾರೆ. ಜಿಲ್ಲೆಯ ವಿವಿಧ ಆಸ್ಪತ್ರೆಗಳು ಹಾಗೂ ಮನೆಗಳಲ್ಲಿ 378 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಜಿಲ್ಲೆಯಲ್ಲಿ 36,648 ಮಾಸ್ಕ್ ಉಲ್ಲಂಘನೆ ಪ್ರಕರಣಗಳು ಪತ್ತೆಯಾಗಿದ್ದು, 37,72,910 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.