×
Ad

ಕೋವಿಡ್ ನಿಯಮ ಉಲ್ಲಂಘಿಸಿದ ಬಸ್‌ಗಳ ವಿರುದ್ಧ ಕ್ರಮ: ಡಿಸಿ ಜಗದೀಶ್

Update: 2021-03-17 21:17 IST

ಉಡುಪಿ, ಮಾ.17: ಮಾಸ್ಕ್ ಧರಿಸದ ನಿಯಮ ಉಲ್ಲಂಘಿಸುವ ಬಸ್‌ಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್, ಉಡುಪಿ ಪ್ರಾದೇಶಿಕ ಸಾರಿಗೆ ಅಧಿಕಾರಿಗೆ ಸೂಚನೆ ನೀಡಿದ್ದಾರೆ.

ಬಸ್ಸುಗಳಲ್ಲಿ ಚಾಲಕರು, ನಿರ್ವಹಕರು ಹಾಗೂ ಪ್ರಯಾಣಿಕರು ಕಡ್ಡಾಯ ವಾಗಿ ಮಾಸ್ಕ್ ಧರಿಸಬೇಕು. ಮಾಸ್ಕ್ ಧರಿಸದೆ ಇರುವ ಪ್ರಯಾಣಿಕರಿಗೆ ಬಸ್ ಗಳಲ್ಲಿ ಪ್ರವೇಶ ನೀಡಬಾರದು. ಒಂದು ವೇಳೆ ಬಸ್‌ಗಳಲ್ಲಿ ಪ್ರಯಾಣಿಕರು ಮಾಸ್ಕ್ ಧರಿಸದಿರುವುದು ಕಂಡು ಬಂದಲ್ಲಿ ಬಸ್ಸುಗಳ ಪರವಾನಿಗೆಯನ್ನು ರದ್ದು ಮಾಡಲು ಹಾಗೂ ಸಂಬಂಧಪಟ್ಟ ಬಸ್ ಮಾಲಕರ ವಿರುದ್ಧ ಪ್ರಕರಣ ದಾಖಲಿಸಲು ಕ್ರಮ ತೆಗೆದುಕೊಳ್ಳುವು ಅನಿವಾರ್ಯವಾದಿತು ಎಂದು ಜಿಲ್ಲಾಧಿಕಾರಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News