ದಿಶಾ ರವಿ ಮನವಿಗೆ ಪ್ರತಿಕ್ರಿಯೆ ಸಲ್ಲಿಸಲು ಕೇಂದ್ರ ದಿಲ್ಲಿ ಪೊಲೀಸರಿಗೆ ಹೈಕೋರ್ಟ್‌ನಿಂದ ಅಂತಿಮ ಅವಕಾಶ

Update: 2021-03-17 18:29 GMT

ಹೊಸದಿಲ್ಲಿ, ಮಾ. 17: ಟೂಲ್‌ಕಿಟ್ ಪ್ರಕರಣದಲ್ಲಿ ತನ್ನ ವಿರುದ್ಧ ದಾಖಲಿಸಲಾದ ಎಫ್‌ಐಆರ್‌ಗೆ ಸಂಬಂಧಿಸಿದ ಯಾವುದೇ ತನಿಖಾ ದಾಖಲೆಗಳನ್ನು ಮಾಧ್ಯಮಗಳಿಗೆ ಸೋರಿಕೆ ಮಾಡುವುದರಿಂದ ಪೊಲೀಸರಿಗೆ ತಡೆ ನೀಡುವಂತೆ ಕೋರಿ ಪರಿಸರ ಹೋರಾಟಗಾರ್ತಿ ದಿಶಾ ರವಿ ಸಲ್ಲಿಸಿದ ಮನವಿಗೆ ಪ್ರತಿಕ್ರಿಯೆ ಸಲ್ಲಿಸಲು ಕೇಂದ್ರ ಸರಕಾರ ಹಾಗೂ ದಿಲ್ಲಿ ಪೊಲೀಸರಿಗೆ ದಿಲ್ಲಿ ಉಚ್ಚ ನ್ಯಾಯಾಲಯ ಬುಧವಾರ ಅಂತಿಮ ಅವಕಾಶ ನೀಡಿದೆ.

ಕೇಂದ್ರ ಸರಕಾರ ಹಾಗೂ ದಿಲ್ಲಿ ಪೊಲೀಸರು ತಮ್ಮ ಪ್ರತಿ ಅಫಿಡವಿಟ್ ಅನ್ನು ಎರಡು ವಾರಗಳ ಒಳಗೆ ಸಲ್ಲಿಸಬೇಕು ಎಂದು ನ್ಯಾಯಮೂರ್ತಿ ಪ್ರತಿಭಾ ಎಂ. ಸಿಂಗ್ ಹೇಳಿದರು ಹಾಗೂ ಪ್ರಕರಣದ ಮುಂದಿನ ವಿಚಾರಣೆಯನ್ನು ಮೇ 18ಕ್ಕೆ ನಿಗದಿಪಡಿಸಿದರು.

ಕೇಂದ್ರ ಸರಕಾರದ ಪರವಾಗಿ ಹಾಜರಾಗಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ ಚೇತನ್ ಶರ್ಮಾ ಹಾಗೂ ನ್ಯಾಯವಾದಿ ಅಜಯ್ ದಿಗ್‌ಪೌಲ್, ದಿಲ್ಲಿ ಪೊಲೀಸರ ಪರವಾಗಿ ಹಾಜರಾಗಿದ್ದ ನ್ಯಾಯವಾದಿ ಅಮಿತ್ ಮಹಾಜನ್ ಮನವಿಗೆ ಪ್ರತಿಕ್ರಿಯೆ ಸಲ್ಲಿಸಲು ಇನ್ನಷ್ಟು ಕಾಲಾವಕಾಶ ನೀಡುವಂತೆ ಕೋರಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News