ಕಲ್ಲಾಪು: ಅಪರಿಚಿತ ವಾಹನ ಢಿಕ್ಕಿ; ದ್ವಿಚಕ್ರ ವಾಹನ ಸವಾರ ಮೃತ್ಯು

Update: 2021-03-18 06:36 GMT
ಸಾಂದರ್ಭಿಕ ಚಿತ್ರ

ಉಳ್ಳಾಲ, ಮಾ.18: ಅಪರಿಚಿತ ವಾಹನ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾ.ಹೆ. 66ರ ತೊಕ್ಕೊಟ್ಟು ಸಮೀಪದ ಕಲ್ಲಾಪು ಬಳಿ ಬುಧವಾರ ತಡರಾತ್ರಿ  ನಡೆದಿದೆ.

 ಜಲ್ಲಿಗುಡ್ಡೆ ನಿವಾಸಿ ಪ್ರಶಾಂತ್(35) ಮೃತಪಟ್ಟವರಾಗಿದ್ದಾರೆ. ಇವರು ತಲಪಾಡಿ ದೇವಿಪುರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಉತ್ಸವಕ್ಕೆ ತೆರಳಿ ಮನೆಗೆ ಹಿಂದಿರುಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಇವರು ಚಲಾಯಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಯಾವುದೋ ವಾಹನ ಢಿಕ್ಕಿ ಹೊಡೆದಿದ್ದು, ಅಪಘಾತದ ಬಳಿಕ ನಿಲ್ಲಿಸದೆ ಪರಾರಿಯಾಗಿದೆ.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ದಕ್ಷಿಣ ಸಂಚಾರ ಠಾಣಾ ಪೊಲೀಸರು, ಅಪಘಾತಕ್ಕೆ ಕಾರಣವಾದ ವಾಹನದ ಪತ್ತೆಗಾಗಿ ಸ್ಥಳೀಯ ಸಿಸಿಟಿವಿ ಕ್ಯಾಮರಾಗಳ ಫೂಟೀಜ್ ಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News