ಕಂಬಳಕ್ಕೆ 1 ಕೋಟಿ ರೂ. ಸಹಾಯಧನ ಬಿಡುಗಡೆ ಮಾಡಿದ ರಾಜ್ಯ ಸರಕಾರ

Update: 2021-03-18 11:02 GMT

ಬೆಂಗಳೂರು, ಮಾ.18: ಕರಾವಳಿಯ ಜಾನಪದ ಕ್ರೀಡೆಯಾದ ಕಂಬಳವನ್ನು ಪ್ರೋತ್ಸಾಹಿಸಲು 1 ಕೋಟಿ ರೂ. ಸಹಾಯಧನ ನೀಡಲು ತೀರ್ಮಾನಿಸಿ, ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ.

ಪ್ರತಿ ಕಂಬಳಕ್ಕೆ 5 ಲಕ್ಷ ರೂ. ಗಳನ್ನು ಸಹಾಯಧನ ನೀಡಲು ಸರ್ಕಾರ ಆದೇಶ ಹೊರಡಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 10 ಕಂಬಳಗಳನ್ನು ನಡೆಸಲು ರೂ. 5 ಲಕ್ಷಗಳಂತೆ ರೂ.50 ಲಕ್ಷ ಮತ್ತು ಉಡುಪಿ ಜಿಲ್ಲೆಯಲ್ಲಿ 10 ಕಂಬಳಗಳನ್ನು ನಡೆಸಲು ರೂ.5 ಲಕ್ಷಗಳಂತೆ ರೂ. 50 ಲಕ್ಷಗಳನ್ನು ಬಿಡುಗಡೆ ಮಾಡಲಾಗಿದೆ. ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದಿಂದ ಕಂಬಳಗಳಿಗೆ ಸಹಾಯಧನ ನೀಡಲಾಗುವುದು ಎಂದು ತಿಳಿಸಿದೆ.

ಪ್ರವಾಸೋದ್ಯಮ, ಪರಿಸರ ಹಾಗೂ ಜೀವಿಶಾಸ್ತ್ರ ಸಚಿವ ಸಿ.ಪಿ. ಯೋಗೇಶ್ವರ್ ರವರು ಕೆಲವು ದಿನಗಳ ಹಿಂದೆ ಪ್ರವಾಸೋದ್ಯಮ ಇಲಾಖೆಯ ಪ್ರಗತಿ ಪರಿಶೀಲನೆಗಾಗಿ ದಕ್ಷಿಣ ಕನ್ನಡ ಜಿಲ್ಲೆಗೆ ಎರಡು ದಿನಗಳ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಕಂಬಳ ವೀಕ್ಷಿಸಿ ಸ್ಥಳದಲ್ಲಿಯೇ ಪ್ರತಿ ಕಂಬಳಕ್ಕೆ ರೂ.5 ಲಕ್ಷಗಳ ಸಹಾಯಧನ ಘೋಷಣೆ ಮಾಡಿದ್ದರು. ಈ ಘೋಷಣೆಯ ಹಿನ್ನಲೆಯಲ್ಲಿ, ರಾಜ್ಯ ಸರ್ಕಾರ ಸಹಾಯಧನ ಬಿಡುಗಡೆ ಮಾಡಿ ಆದೇಶವನ್ನು ಹೊರಡಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News