ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ

Update: 2021-03-18 13:36 GMT

ಉಡುಪಿ, ಮಾ.18: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ಪ್ರಸ್ತುತ ಸಾಲಿನಲ್ಲಿ ಮೆಟ್ರಿಕ್ ನಂತರದ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿ ಹಾಗೂ ಅಲೆಮಾರಿ/ ಅಲೆ ಅರೆಮಾರಿ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಹಾಗೂ ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಸೌಲಭ್ಯಕ್ಕಾಗಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಎಪ್ರಿಲ್ 20 ರವರೆಗೆ ವಿಸ್ತರಿಸಲಾಗಿದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ -www.ssp.postmatric.karnataka.gov.in- ಹಾಗೂ ದೂರವಾಣಿ ಸಂಖ್ಯೆ: 0820-2573881 ಅನ್ನು ಸಂಪರ್ಕಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News