ಪಶ್ಚಿಮ ಬಂಗಾಳ ಚುನಾವಣೆ: 148 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ

Update: 2021-03-18 14:57 GMT
ಮುಕುಲ್ ರಾಯ್

ಕೋಲ್ಕತಾ: ಬಿಜೆಪಿ ಮುಂಬರುವ ಪಶ್ಚಿಮಬಂಗಾಳ ಚುನಾವಣೆಗೆ ಮುಕುಲ್ ರಾಯ್ ಸಹಿತ 148 ಅಭ್ಯರ್ಥಿಗಳಿರುವ ಎರಡನೇ ಪಟ್ಟಿಯನ್ನು ಗುರುವಾರ ಬಿಡುಗಡೆ ಮಾಡಿದೆ. ಈ ಚುನಾವಣೆಯಲ್ಲಿ ಬಿಜೆಪಿ ಇನ್ನೋರ್ವ ಸಂಸದ ಜಗನ್ನಾಥ್ ಸರ್ಕಾರ್ ರನ್ನು ಕಣಕ್ಕಿಳಿಸಿದೆ. ಬಿಜೆಪಿ ಈಗಾಗಲೇ ನಾಲ್ವರು ಸಂಸದರಿಗೆ ಅಸೆಂಬ್ಲಿ ಚುನಾವಣೆಯ ಟಿಕೆಟ್ ನೀಡಿತ್ತು.

ರಾನಾಘಾಟ್ ನ ಸಂಸದ ಸರ್ಕಾರ್ ಅವರು ಶಾಂತಿಪುರದಿಂದ ಸ್ಪರ್ಧಿಸಲಿದ್ದಾರೆ. ಬಂಗಾಳ ಬಿಜೆಪಿ ಅಧ್ಯಕ್ಷ ದಿಲಿಪ್ ಘೋಷ್ ಅವರ ಹೆಸರು ಪಟ್ಟಿಯಲ್ಲಿಲ್ಲ. ಘೋಷ್ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಮೂಲಗಳು ತಿಳಿಸಿವೆ.

ಬಂಗಾಳದ ಹಿರಿಯ ನಾಯಕ ರಾಹುಲ್ ಸಿನ್ಹಾ ಹಾಬ್ರಾದಿಂದ ಸ್ಪರ್ಧಿಸಲಿದ್ದಾರೆ.

ತೃಣಮೂಲ ಕಾಂಗ್ರೆಸ್ ನ ಮಾಜಿ ಹಿರಿಯ ನಾಯಕರಾಗಿರುವ ರಾಯ್ ಒಂದು ಕಾಲದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಆಪ್ತರಾಗಿದ್ದರು. ಇದೀಗ ಅವರು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷರಾಗಿದ್ದಾರೆ.

ಬಿಜೆಪಿ ತನ್ನ ಎರಡನೇ ಪಟ್ಟಿಯಲ್ಲೂ ಸೆಲೆಬ್ರಿಟಿಗಳಿಗೆ ಮಣೆ ಹಾಕಿದೆ. ಜಾನಪದ ಕಲಾವಿದ ಆಶೀಮ್ ಸರ್ಕಾರ್ ಹರಿನ್ ಘಾಟ್ ಅಸೆಂಬ್ಲಿ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ವಿಜ್ಞಾನಿ ಗೋವರ್ಧನ್ ದಾಸ್ ಪುರ್ಬಸ್ಥಳಿ ಉತ್ತರ್ ನಿಂದ ಸ್ಪರ್ಧಿಸಲಿದ್ದಾರೆ.

 ಪ.ಬಂಗಾಳ ಚುನಾವಣೆಯ 5ನೇ, 6ನೇ, 7ನೇ ಹಾಗೂ 8ನೇ ಹಂತಕ್ಕೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದೆ. ಕಳೆದ ವಾರ ಮೊದಲ ಪಟ್ಟಿಯನ್ನು ಪ್ರಕಟಿಸಲಾಗಿತ್ತು. ಇದಕ್ಕೆ ಭಾರೀ ಪ್ರತಿಭಟನೆ ವ್ಯಕ್ತವಾಗಿದ್ದು, ಎರಡು ದಿನಗಳ ಕಾಲ ನಡೆದ ಕಾರ್ಯಕರ್ತರ ಗಲಾಟೆಯನ್ನು ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News