ರಾಜ್ಯ ವಿಧಾನಸಭೆ ಉಪಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ ಕಾಂಗ್ರೆಸ್
Update: 2021-03-18 21:07 IST
ಬೆಂಗಳೂರು, ಮಾ.18: ರಾಜ್ಯದಲ್ಲಿ ಎಪ್ರಿಲ್17 ರಂದು ನಡೆಯಲಿರುವ ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಗುರುವಾರ ಅಭ್ಯರ್ಥಿಗಳನ್ನು ಘೋಷಿಸಿದೆ.
ನಾರಾಯಣರಾವ್ ಅವರ ನಿಧನದಿಂದ ತೆರವಾಗಿದ್ದ ಬಸವಕಲ್ಯಾಣ ಕ್ಷೇತ್ರದಲ್ಲಿ ನಾರಾಯಣರಾವ್ ಅವರ ಪತ್ನಿ ಮಲ್ಲಮ್ಮ ಅವರಿಗೆ ಟಿಕೆಟ್ ನೀಡಲಾಗಿದೆ. ಪ್ರತಾಪಗೌಡ ಪಾಟೀಲ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಮಸ್ಕಿ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಬಸವನಗೌಡ ತುರವಿಹಾಳ ಅವರಿಗೆ ಟಿಕೆಟ್ ನೀಡಲಾಗಿದೆ. ತುರವಿಹಾಳ ಅವರು ಇತ್ತೀಚಿಗಷ್ಟೇ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದರು.
ಇನ್ನಷ್ಟೇ ಉಪಚುನಾವಣೆ ಘೋಷಣೆ ಆಗಬೇಕಿರುವ ಸಿಂದಗಿ ಕ್ಷೇತ್ರಕ್ಕೂ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಘೋಷಿಸಿದ್ದು, ದಿವಂಗತ ಎಂ.ಸಿ.ಮನಗೂಳಿ ಅವರ ಪುತ್ರ ಅಶೋಕ ಮನಗೂಳಿ ಅವರಿಗೆ ಟಿಕೆಟ್ ನೀಡಲಾಗಿದೆ.
ಆದರೆ, ಎಪ್ರಿಲ್17 ರಂದೇ ಉಪಚುನಾವಣೆ ನಡೆಯಲಿರುವ ಬೆಳಗಾವಿ ಲೋಕಸಭೆ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯನ್ನು ಘೋಷಿಸಿಲ್ಲ.