×
Ad

ಹಾಸನ: ರಸ್ತೆ ಬದಿ ನಿಲ್ಲಿಸಿದ್ದ ಕ್ಯಾಂಟರ್ ವಾಹನದಲ್ಲಿ ಬೆಂಕಿ; ಚಾಲಕ ಸಜೀವ ದಹನ

Update: 2021-03-18 21:32 IST

ಹಾಸನ, ಮಾ.18: ರಸ್ತೆ ಬದಿ ನಿಲ್ಲಿಸಿದ್ದ ಕ್ಯಾಂಟರ್ ವಾಹನದಲ್ಲಿ ಬೆಂಕಿ ಕಾಣಿಸಿಕೊಂಡು, ಚಾಲಕನೋರ್ವ ಬೆಂಕಿಯಲ್ಲಿ ಸಜೀವ ದಹನವಾದ ಘಟನೆ ಹಾಸನ ನಗರದ ಹೊರವಲಯ ಬಿಟ್ಟಗೌಡನಹಳ್ಳಿ, ಬೈಪಾಸ್ ರಸ್ತೆಯ ಬಳಿ ನಡೆದಿದೆ.

ತಮಿಳುನಾಡು ಮೂಲದ ಜಮೀರ್ (40) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ.

ಗುರುವಾರ ಬೆಳಗಿನ ಜಾವದಲ್ಲಿ ಕ್ಯಾಂಟರ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದ್ದು, ಸ್ಥಳೀಯರು ನೀರು ಹಾಕಿ ಬೆಂಕಿ ನಂದಿಸಲು ಮುಂದಾದರೂ ಚಾಲಕ ಬದುಕುಳಿಯಲಿಲ್ಲ. ಚಾಲಕ ಸೀಟಿನಲ್ಲಿ ಕುಳಿತಿರುವಂತೆ ಸಾವನಪ್ಪಿದ್ದಾನೆ.

ಘಟನಾ ಸ್ಥಳಕ್ಕೆ ನಗರ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಭೇಟಿ ನೀಡಿ ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News