ಕೆಪಿಎಸ್‍ಸಿ ಅಕ್ರಮ ತಡೆಗೆ ನಿಯಮಗಳಲ್ಲಿ ತಿದ್ದುಪಡಿ: ಬಸವರಾಜ ಬೊಮ್ಮಾಯಿ

Update: 2021-03-18 16:21 GMT

ಬೆಂಗಳೂರು, ಮಾ.18: ಕರ್ನಾಟಕ ಲೋಕಸೇವಾ ಆಯೋಗವು ಕಾಲಕಾಲಕ್ಕೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸುತ್ತಿದೆ. ಆದರೆ, ಅಕ್ರಮಗಳು ನಡೆಯುತ್ತಿರುವ ಬಗ್ಗೆ ಆರೋಪಗಳು ಕೇಳಿ ಬರುತ್ತಿವೆ. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಲೋಕಸೇವಾ ಆಯೋಗದ ಮಾದರಿಯಲ್ಲಿಯೇ ಪರೀಕ್ಷೆಗಳನ್ನು ನಡೆಸುವ ಬಗ್ಗೆ ನಿಯಮಗಳಲ್ಲಿ ತಿದ್ದುಪಡಿ ತರಲು ಪರಿಶೀಲಿಸಲಾಗುತ್ತಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಗುರುವಾರ ವಿಧಾನ ಪರಿಷತ್ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಸದಸ್ಯ ಪ್ರದೀಪ್ ಶೆಟ್ಟರ್ ಕೇಳಿದ ಪ್ರಶ್ನೆಗೆ ಮುಖ್ಯಮಂತ್ರಿಗಳ ಪರವಾಗಿ ಉತ್ತರಿಸಿದ ಸಚಿವರು, ಇನ್ನು ಮುಂದೆ ತಂತ್ರಜ್ಞಾನವನ್ನು ಅಳವಡಿಸಿಕೊಂಡು ಆನ್‍ಲೈನ್ ಮುಖಾಂತರ ಪರೀಕ್ಷೆಗಳನ್ನು ನಡೆಸುವ ಬಗ್ಗೆ ಕೇಂದ್ರ ಸರಕಾರದ ಸ್ಟಾಪ್ ಸೆಲೆಕ್ಷನ್ ಕಮಿಷನ್ ಇವರೊಂದಿಗೆ ಚರ್ಚಿಸಿ ಅದರಂತೆಯೇ ಅಳವಡಿಸಿಕೊಳ್ಳುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಹೇಳಿದರು.

ಸಿಬ್ಬಂದಿಗಳ ಅಮಾನತ್ತು: ಕರ್ನಾಟಕ ಲೋಕಸೇವಾ ಆಯೋಗವು ಕಾಲಕಾಲಕ್ಕೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸುತ್ತದೆ. ಪ್ರಸ್ತುತ ಸಹಾಯಕರು ಮತ್ತು ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ಪ್ರಶ್ನೆ ಪತ್ರಿಕೆಯು ಆಯೋಗದ ಸಿಬ್ಬಂದಿಯಿಂದಾಗಿ ಸೋರಿಕೆಯಾಗಿದ್ದು, ಆರೋಪಿತರನ್ನು ಸೇವೆಯಿಂದ ಅಮಾನತ್ತುಗೊಳಿಸಲಾಗಿದೆ ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News