ನಾಲ್ಕನೇ ಟ್ವೆಂಟಿ-20: ಭಾರತಕ್ಕೆ ರೋಚಕ ಜಯ, ಸರಣಿ ಸಮಬಲ

Update: 2021-03-18 18:00 GMT

ಅಹಮದಾಬಾದ್: ಹಾರ್ದಿಕ್ ಪಾಂಡ್ಯ, ಶಾರ್ದೂಲ್ ಠಾಕೂರ್ ಹಾಗೂ ರಾಹುಲ್ ಚಹಾರ್ ಅವರ ಶಿಸ್ತುಬದ್ಧ ಬೌಲಿಂಗ್, ಸೂರ್ಯ ಕುಮಾರ್ ಯಾದವ್ ಚೊಚ್ಚಲ ಪಂದ್ಯದಲ್ಲಿ ಸಿಡಿಸಿದ ಅರ್ಧಶತಕದ (57, 31 ಎಸೆತ, 6 ಬೌಂಡರಿ, 3 ಸಿಕ್ಸರ್ )ಕೊಡುಗೆಯ ನೆರವಿನಿಂದ ಭಾರತ ತಂಡ ಇಂಗ್ಲೆಂಡ್ ವಿರುದ್ಧದ 4ನೇ ಟ್ವೆಂಟಿ-20 ಅಂತರ್ ರಾಷ್ಟ್ರೀಯ ಪಂದ್ಯವನ್ನು 8 ರನ್ ಗಳ ಅಂತರದಿಂದ ಗೆದ್ದುಕೊಂಡಿದೆ. ಇದರೊಂದಿಗೆ 5 ಪಂದ್ಯಗಳ ಸರಣಿಯನ್ನು 2-2ರಿಂದ ಸಮಬಲಗೊಳಿಸಿದೆ.

ಗುರುವಾರ ಇಲ್ಲಿ ನಡೆದ ಪಂದ್ಯದಲ್ಲಿ ಗೆಲ್ಲಲು 186 ರನ್ ಗುರಿ ಬೆನ್ನಟ್ಟಿದ ಇಂಗ್ಲೆಂಡ್ ತಂಡ ನಿಗದಿತ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 177 ರನ್ ಗಳಿಸಿ ಸೋಲೊಪ್ಪಿಕೊಂಡಿತು. ಇಂಗ್ಲೆಂಡ್ ಪರವಾಗಿ ಬೆನ್ ಸ್ಟೋಕ್ಸ್ (46), ಜೇಸನ್ ರಾಯ್ (40) ಹಾಗೂ ಜಾನಿ ಬೈರ್ ಸ್ಟೋವ್ (25)ಎರಡಂಕೆಯ ಸ್ಕೋರ್ ಗಳಿಸಿದರು.

ಶಾರ್ದೂಲ್ ಠಾಕೂರ್ (3-42)ದುಬಾರಿಯಾದರೂ ಯಶಸ್ವಿ ಬೌಲರ್ ಎನಿಸಿಕೊಂಡರು. ಹಾರ್ದಿಕ್ ಪಾಂಡ್ಯ(2-16), ರಾಹುಲ್ ಚಹಾರ್ (2-35) ತಲಾ ಎರಡು ವಿಕೆಟ್ ಗಳನ್ನು ಪಡೆದಿದ್ದಾರೆ.

ಇದಕ್ಕೂ  ಮೊದಲು  ಟಾಸ್ ಸೋತು ಮೊದಲು ಬ್ಯಾಟಿಂಗ್ ಗೆ ಆಹ್ವಾನಿಸಲ್ಪಟ್ಟ ಭಾರತವು ನಿಗದಿತ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 185 ರನ್ ಗಳಿಸಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News