ಸಾಮರ್ಥ್ಯ ವರ್ಧನ ತರಬೇತಿ ಕಾರ್ಯಾಗಾರ
ಕುಂದಾಪುರ, ಮಾ.19: ಕರ್ನಾಟಕ ರಾಜ್ಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ವೇದಿಕೆ ಉಡುಪಿ ಜಿಲ್ಲೆ, ತಾಲೂಕ ಘಟಕ ಕುಂದಾಪುರ, ಬೈಂದೂರು, ಪುರಸಭೆ ಕುಂದಾಪುರ, ಸಾರ್ವಜನಿಕ ಶಿಕ್ಷಣ ಇಲಾಖೆ ಕುಂದಾಪುರ ತಾಲೂಕು, ಸಮಾಜ ಕಲ್ಯಾಣ ಇಲಾಖೆ ಕುಂದಾಪುರ ಇವುಗಳ ಸಹಭಾಗಿತ್ವದಲ್ಲಿ ಕುಂದಾಪುರ ಪುರಸಭೆ ವ್ಯಾಪ್ತಿಯ ಸರಕಾರಿ ಶಾಲೆಗಳ ಎಸ್‌ಡಿಎಂಸಿ ಸದಸ್ಯರಿಗೆ ಸಾಮರ್ಥ್ಯ ವರ್ಧನ ತರಬೇತಿ ಕಾರ್ಯಾಗಾರವನ್ನು ಕುಂದಾಪುರ ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿತ್ತು.
ಅಧ್ಯಕ್ಷತೆಯನ್ನು ಎಸ್‌ಡಿಎಂಸಿ ಸಮನ್ವಯ ವೇದಿಕೆಯ ತಾಲೂಕು ಘಟಕದ ಅಧ್ಯಕ್ಷ ಎಸ್.ವಿ.ನಾಗರಾಜ್ ವಹಿಸಿದ್ದರು. ಕಾರ್ಯಕ್ರಮವನ್ನು ಕುಂದಾಪುರ ಪುರಸಭಾ ಅಧ್ಯಕ್ಷೆ ವೀಣಾ ಭಾಸ್ಕರ್ ಉದ್ಘಾಟಿಸಿದರು.
ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಕೆಪದ್ಮನಾಭ ಮಾತನಾಡಿ, ಮಗು ವಿಗೆ ಗುಣಮಟ್ಟದ ಶಿಕ್ಷಣ ಸಿಗಲು ಶಿಕ್ಷಕರು ಮತ್ತು ಇಲಾಖೆಯ ಅಧಿಕಾರಿ ಗಳೊಂದಿಗೆ ಎಸ್‌ಡಿಎಂಸಿ ಮತ್ತು ಪೋಷಕರು ಕೈ ಜೋಡಿಸಿದಾಗ ಮಾತ್ರ ಮಗುವಿಗೆ ಗುಣಮಟ್ಟದ ಶಿಕ್ಷಣ ಸಿಗುವುದರೊಂದಿಗೆ ಸರಕಾರಿ ಶಾಲೆಗಳ ಅಭಿವೃದ್ಧಿ ಸಾಧ್ಯ ಎಂದರು.
ಪುರಸಭೆ ಉಪಾಧ್ಯಕ್ಷ ಸಂದೀಪ್ ಖಾರ್ವಿ, ವೇದಿಕೆ ಶಿವಮೊಗ್ಗ ಜಿಲ್ಲಾಧ್ಯಕ್ಷ ಅಶ್ವಿನಿ ಕುಮಾರ್, ಕಾರವಾರ ಜಿಲ್ಲಾಧ್ಯಕ್ಷೆ ಶಾಂತಿಬಾಯಿ, ಸಿಆರ್ಪಿಗಳಾದ ಸುನಿತಾ, ಶಂಕರ್ ಶೆಟ್ಟಿ, ಉಡುಪಿ ತಾಲೂಕು ಶಿಕ್ಷಣ ಸಂಪನ್ಮೂಲ ಕೇಂದ್ರದ ಕಾರ್ಯದರ್ಶಿ ಬಾಲಕೃಷ್ಣ ಪೂಜಾರಿ, ವೇದಿಕೆಯ ಜಿಲ್ಲಾ ಸಮಿತಿ ಪದಾಧಿಕಾರಿ ಶೋಭಾ ಭಾಸ್ಕರ್ ಕಾರ್ಕಳ, ತಾಲೂಕು ಕಾರ್ಯದರ್ಶಿ ಜ್ಯೋತಿ ಶೆಟ್ಟಿ ಮೊದ ಲಾದವರು ಉಪಸ್ಥಿತರಿದ್ದರು.
ವೇದಿಕೆ ಜಿಲ್ಲಾಧ್ಯಕ್ಷ ಅಬ್ದುಲ್ ಸಲಾಂ ಚಿತ್ತೂರು ಪ್ರಾಸ್ತಾವಿಕವಾಗಿ ಮಾತನಾ ಡಿದರು. ಜಿಲ್ಲಾ ಸಮಿತಿ ಸದಸ್ಯೆ ದೀಪಾ ಜಪ್ತಿ ಸ್ವಾಗತಿಸಿ, ರವಿ ಮಡಿವಾಳ ಮರವಂತೆ ವಂದಿಸಿದರು. ಸಂಪನ್ಮೂಲ ವ್ಯಕ್ತಿ ಹರಿಶ್ಚಂದ್ರ ಆಚಾರ್ ಕಾರ್ಯಕ್ರಮ ವನ್ನು ನಿರೂಪಿಸಿದರು.