ಕೋವಿಯಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ
Update: 2021-03-19 20:38 IST
ಕಾರ್ಕಳ, ಮಾ.19: ಕೋವಿಯಿಂದ ಶೂಟ್ ಮಾಡಿಕೊಂಡು ಯುವಕ ನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲ್ಯಾ ಗ್ರಾಮದ ಕುಂಟಾಡಿ ಎಂಬಲ್ಲಿ ಮಾ.18ರಂದು ನಡೆದಿದೆ.
ಮೃತರನ್ನು ಕುಂಟಾಡಿಯ ಅಡ್ಕುಂಜ ನಿವಾಸಿ ಸುರೇಂದ್ರ ಅಮೀನ್ ಎಂಬವರ ಮಗ ವಿಶಾಕ್ ಪೂಜಾರಿ(30) ಎಂದು ಗುರುತಿಸಲಾಗಿದೆ. ಇವರು ವೈಯಕ್ತಿಕ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಬೆಳಗ್ಗೆ 10ಗಂಟೆಯಿಂದ ಸಂಜೆ 5 ಗಂಟೆಯ ನಡುವಿನ ಮಧ್ಯಾವಧಿಯಲ್ಲಿ ಬೆಳೆ ರಕ್ಷಣೆಗಾಗಿ ಹೊಂದಿದ್ದ ಕೋವಿಯಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ದೂರಲಾಗಿದೆ.
ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.