1835 ಅತಿಥಿ ಉಪನ್ಯಾಸಕರ ನೇಮಕಕ್ಕೆ ಅನುಮೋದನೆ

Update: 2021-03-19 18:36 GMT

ಬೆಂಗಳೂರು, ಮಾ.19: 2020-21ನೆ ಶೈಕ್ಷಣಿಕ ಸಾಲಿನಲ್ಲಿ ರಾಜ್ಯದ ಸರಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ವಿವಿಧ ಕಾರಣಗಳಿಂದ ತೆರವಾದ ಒಟ್ಟು 2832 ಉಪನ್ಯಾಸಕರ ಹುದ್ದೆಗಳ ಪೈಕಿ ಒಟ್ಟು 1835 ಅತಿಥಿ ಉಪನ್ಯಾಸಕರನ್ನು, 2021ರ ಫೆಬ್ರವರಿ ತಿಂಗಳಿನಿಂದ ಮಾಸಿಕ 9000 ರೂ.ಗಳ ಗೌರವ ಧನದ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲು ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದು ಶಿಕ್ಷಣ ಇಲಾಖೆ(ಪದವಿ ಪೂರ್ವ ಶಿಕ್ಷಣ)ಯ ಸರಕಾರದ ಅಧೀನ ಕಾರ್ಯದರ್ಶಿ ಧನಂಜಯ ಎಂ. ಸರಕಾರಿ ಆದೇಶದಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News