×
Ad

ಚೀನಾದ ಲಸಿಕೆ ಪಡೆದ ಬಳಿಕ ಪಾಕಿಸ್ತಾನದ ಪ್ರಧಾನಿ ಇಮ್ರಾನ್‌ ಖಾನ್‌ ಗೆ ಕೋವಿಡ್‌ ಪಾಸಿಟಿವ್

Update: 2021-03-20 15:33 IST

ಇಸ್ಲಾಮಾಬಾದ್ (ಪಾಕಿಸ್ತಾನ), ಮಾ. 20: ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಕೊರೋನ ವೈರಸ್ ಸೋಂಕಿಗೆ ಗುರಿಯಾಗಿದ್ದಾರೆ ಎಂದು ಪಾಕಿಸ್ತಾನ ಪ್ರಧಾನಿಯ ವಿಶೇಷ ಆರೋಗ್ಯ ಸಲಹೆಗಾರ ಫೈಸಲ್ ಸುಲ್ತಾನ್ ಹೇಳಿದ್ದಾರೆ. ಅವರು ಮನೆಯಲ್ಲೇ ಪ್ರತ್ಯೇಕವಾಗಿ ಉಳಿದಿದ್ದಾರೆ ಎಂಬುದಾಗಿ ಫೈಸಲ್ ಟ್ವೀಟ್ ಮಾಡಿದ್ದಾರೆ.

68 ವರ್ಷದ ಖಾನ್‌ಗೆ ಗುರುವಾರವಷ್ಟೇ ಕೊರೋನ ವೈರಸ್ ಲಸಿಕೆ ಹಾಕಲಾಗಿತ್ತು.

ಪಾಕಿಸ್ತಾನದಲ್ಲಿ ಕೊರೋನ ವೈರಸ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ದೇಶದಲ್ಲಿ ಒಟ್ಟು ಸೋಂಕು ಪ್ರಕರಣಗಳ ಸಂಖ್ಯೆ 6.15 ಲಕ್ಷವನ್ನು ದಾಟಿದೆ ಹಾಗೂ 13,700ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News