×
Ad

ಅರ್ಜಿ ಆಹ್ವಾನ

Update: 2021-03-20 16:54 IST

ಉಡುಪಿ, ಮಾ.20: ಡಾ.ಬಾಬು ಜಗಜೀವನರಾಮ್ ಅವರ 114ನೇ ಹಾಗೂ ಡಾ. ಬಿ.ಆರ್.ಅಂಬೇಡ್ಕರ್‌ರ 130ನೇ ಜನ್ಮ ದಿನಾಚರಣೆ ಅಂಗ ವಾಗಿ, ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗದ ಜನಾಂಗದ ಶ್ರೇಯಸ್ಸಿಗಾಗಿ ಪ್ರೋತ್ಸಾಹಿಸಿ, ಶ್ರಮಿಸಿ ಗಣನೀಯ ಸೇವೆ ಸಲ್ಲಿಸಿದ ಅರ್ಹ ವ್ಯಕ್ತಿಗಳನ್ನು ಗುರುತಿಸಿ, 2021-22ರ ಸಾಲಿನ ಡಾ.ಬಾಬು ಜಗಜೀವನರಾಮ್ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಪ್ರಶಸ್ತಿಗಳನ್ನು ನೀಡಲು ಅರ್ಜಿ ಗಳನ್ನು ಆಹ್ವಾನಿಸಲಾಗಿದೆ.

ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಉಡುಪಿ, ಕುಂದಾಪುರ ಮತ್ತು ಕಾರ್ಕಳ ಇವರಿಂದ ಪಡೆದು ಅರ್ಜಿಯನ್ನು ಮಾ.24ರ ಒಳಗೆ ಈ ಕಚೇರಿಗಳಿಗೆ ಅಂಚೆ ಮೂಲಕ ಅಥವಾ ಖುದ್ದಾಗಿ ಸಲ್ಲಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News