ಮಹಾರಾಷ್ಟ್ರ ಸಚಿವ ಆದಿತ್ಯ ಠಾಕ್ರೆಗೆ ಕೊರೋನ ಪಾಸಿಟಿವ್
Update: 2021-03-20 19:19 IST
ಮುಂಬೈ: ಮಹಾರಾಷ್ಟ್ರದ ಸಂಪುಟ ಸಚಿವ ಹಾಗೂ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಪುತ್ರ ಆದಿತ್ಯ ಠಾಕ್ರೆಗೆ ಕೊರೋನ ವೈರಸ್ ಸೋಂಕು ತಗಲಿರುವುದು ದೃಢಪಟ್ಟಿದೆ. ನನ್ನೊಂದಿಗೆ ಸಂಪರ್ಕಕ್ಕೆ ಬಂದವರು ಕೊರೋನ ಟೆಸ್ಟ್ ಮಾಡಿಸಿಕೊಳ್ಳುವಂತೆ ಆದಿತ್ಯ ಠಾಕ್ರೆ ಟ್ವೀಟ್ ಮುಖಾಂತರ ವಿನಂತಿಸಿಕೊಂಡಿದ್ದಾರೆ.
ನನಗೆ ಕೋವಿಡ್ ನ ಸೌಮ್ಯ ಲಕ್ಷಣ ಕಾಣಿಸಿಕೊಂಡಿದೆ. ನಾನು ಸ್ವತಃ ಕೊರೋನ ಪರೀಕ್ಷೆ ಮಾಡಿಸಿಕೊಂಡಿದ್ದೆ. ನನಗೆ ಕೋವಿಡ್ ಪಾಸಿಟಿವ್ ಬಂದಿದೆ. ನನ್ನೊಂದಿಗೆ ಸಂಪರ್ಕಕ್ಕೆ ಬಂದವರು ದಯಮಾಡಿ ಪರೀಕ್ಷೆ ಮಾಡಿಸಿಕೊಳ್ಳಿ. ದಯವಿಟ್ಟು ಕೋವಿಡ್ ಶಿಷ್ಟಾಚಾರವನ್ನು ಪಾಲಿಸಿ, ಸುರಕ್ಷಿತವಾಗಿರಿ ಎಂದು ಆದಿತ್ಯ ಟ್ವೀಟಿಸಿದ್ದಾರೆ.
ಮಹಾರಾಷ್ಟ್ರದಲ್ಲಿ ಈಗ ದೈನಂದಿನ ಕೊರೋನ ವೈರಸ್ ಕೇಸ್ ಗಳು ಹೆಚ್ಚಳವಾಗುತ್ತಿವೆ. ಕಳೆದ 2 ದಿನಗಳಲ್ಲಿ ರಾಜ್ಯದಲ್ಲಿ 25,000ಕ್ಕೂ ಅಧಿಕ ಕೋವಿಡ್ ಕೇಸ್ ಗಳು ವರದಿಯಾಗಿವೆ. ರಾಜ್ಯ ರಾಜಧಾನಿ ಮುಂಬೈನಲ್ಲಿ ಶುಕ್ರವಾರ 3,000ಕ್ಕೂ ಅಧಿಕ ಕೇಸ್ ಗಳು ವರದಿಯಾಗಿವೆ.