×
Ad

ಉಡುಪಿ : ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯದಲ್ಲಿ ಮೂಡಿತು ಕೋವಿಡ್ ಜಾಗೃತಿ

Update: 2021-03-20 19:31 IST

ಉಡುಪಿ, ಮಾ.20: ಹೆಬ್ರಿ ತಾಲೂಕಿನ ಕಬ್ಬಿನಾಲೆಯಲ್ಲಿ ನಡೆದ ಜಿಲ್ಲಾಧಿಕಾರಿ ಜಿ.ಜಗದೀಶ್ ಅವರ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಕೋವಿಡ್ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಯಿತು.

ಕಾರ್ಯಕ್ರಮಕ್ಕೆ ಆಗಮಿಸಿದ ಎಲ್ಲಾ ಸಾರ್ವಜನಿಕರು ಮತ್ತು ಅಧಿಕಾರಿಗಳನ್ನು ಥರ್ಮಲ್ ಸ್ಕ್ಯಾನರ್ ಮೂಲಕ ಪರಿಶೀಲಿಸಿ, ಮಾಸ್ಕ್ ಧರಿಸುವುದು ಕಡ್ಡಾಯಗೊಳಿಸಲಾಗಿತ್ತು. ಮಾಸ್ಕ್ ಧರಿಸದೇ ಬಂದವರಿಗೆ ಆರೋಗ್ಯ ಇಲಾಖೆಯಿಂದ ಉಚಿತವಾಗಿ ಮಾಸ್ಕ್ ವಿತರಣೆ ಮಾಡಲಾಯಿತು.

ಸ್ಥಳದಲ್ಲೇ ಆರೋಗ್ಯ ತಪಾಸಣಾ ಶಿಬಿರ ಅಯೋಜಿಸಿದ್ದು, ಸಾರ್ವಜನಿಕರು ಹಾಗೂ ಜಿಲ್ಲಾಧಿಕಾರಿ, ಅಪರ ಜಿಲ್ಲಾಧಿಕಾರಿ, ಉಪ ವಿಬಾಗಾಧಿಕಾರಿ ಸೇರಿದಂತೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅಧಿಕಾರಿಗಳು ಆರೋಗ್ಯ ತಪಾಸಣೆ ಮಾಡಿಸಿಕೊಂಡರು.ಸ್ಥಳದಲ್ಲಿ ಕೋವಿಡ್ ಪರೀಕ್ಷೆ ಮಾಡಲು ಸಹ ವ್ಯವಸ್ಥೆ ಮಾಡಿದ್ದು, 25ಕ್ಕೂ ಅಧಿಕ ಮಂದಿ ಆರ್‌ಟಿಪಿಸಿಆರ್ ಪರೀಕ್ಷೆಗೆ ತಮ್ಮ ಗಂಟಲು ಮಾದರಿಗಳನ್ನು ನೀಡಿದರು.

ಗ್ರಾಮದ ಸುತ್ತಮುತ್ತಲಿನ ಹಿರಿಯ ನಾಗರಿಕರಿಗೆ ಕೋವಿಡ್ ಲಸಿಕೆ ನೀಡಲು ವ್ಯವಸ್ಥೆ ಮಾಡಿದ್ದು, ಗ್ರಾಮಗಳಿಂದ 40ಕ್ಕೂ ಅಧಿಕ ಮಂದಿಗೆ ವಾಹನ ವ್ಯವಸ್ಥೆ ಮಾಡಿ ಹೆಬ್ರಿ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಿ ಲಸಿಕೆ ನೀಡಲಾಯಿತು.

ಡಿಹೆಚ್‌ಓ ಡಾ.ಸುಧೀರ್‌ಚಂದ್ರ ಸೂಡಾ, ತಾಲೂಕು ಆರೋಗ್ಯಾಧಿಕಾರಿ ಕೃಷ್ಣಾನಂದ, ಕೋವಿಡ್ ನೋಡೆಲ್ ಅಧಿಕಾರಿ ಡಾ. ಪ್ರಶಾಂತ್ ಟ್, ವಿಶೇಷಾಧಿಕಾರಿ ಡಾ.ಪ್ರೇಮಾನಂದ ಹಾಗೂ ಆರೋಗ್ಯ ಇಲಾಖೆಯ ವಿವಿಧ ಅಧಿಕಾರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News