ಜಾನುವಾರುಗಳಿಗೆ ವಿಮಾ ಸೌಲಭ್ಯ: ರವಿರಾಜ್ ಹೆಗ್ಡೆ ಕೊಡವೂರು
ಉಡುಪಿ, ಮಾ.20: ಹೈನುಗಾರಿಕೆಯಲ್ಲಿನ ಆರ್ಥಿಕ ಸಂಕಷ್ಟ ತಪ್ಪಿಸುವ ನಿಟ್ಟಿನಲ್ಲಿ ಮೃತಪಟ್ಟ ಜಾನುವಾರುಗಳಿಗೆ ವಿಮಾ ಸೌಲಭ್ಯ ಕಲ್ಪಿಸಲಾಗಿದ್ದು, ಇದಕ್ಕಾಗಿ ಕಳೆದ ಎರಡು ವರ್ಷಗಳಲ್ಲಿ 3-4ಕೋಟಿ ರೂ. ವ್ಯಯ ಮಾಡಲಾಗಿದೆ ಎಂದು ದ.ಕ.ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ರವಿರಾಜ್ ಹೆಗ್ಡೆ ಕೊಡವೂರು ಹೇಳಿದ್ದಾರೆ.
ಉಡುಪಿ ತಾಲೂಕು ಹಾಲು ಉತ್ಪಾದಕರ ಸಹಕಾರಿ ಸಂಘಗಳ ನೌಕರರ ಒಕ್ಕೂಟದ ವತಿಯಿಂದ ಶನಿವಾರ ಬಡಗಬೆಟ್ಟು ಸೊಸೈಟಿ ಸಭಾಂಗಣ ದಲ್ಲಿ ಆಯೋಜಿಸಲಾದ ನೌಕರರ ಸಮಾವೇಶವನ್ನು ಉ್ಘಾಟಿಸಿ ಅವರು ಮಾತ ನಾಡುತಿದ್ದರು.
2020ನೇ ಸಾಲಿನಲ್ಲಿ ಹಾಲು ಉತ್ಪಾದನೆ ಪ್ರಮಾಣ ಸರಾಸರಿ 1.45ಲಕ್ಷ ಲೀಟರ್‌ಗೆ ಇಳಿದಿದ್ದು, ಪ್ರಸ್ತುತ ವರ್ಷದಲ್ಲಿ 4.5ಲಕ್ಷ ಲೀಟರ್ ಗುಣ ಮಟ್ಟದ ಹಾಲು ಸಂಗ್ರಹ ಆಗುತ್ತಿದೆ. ರೈತರಿಗೆ ನೀಡುತ್ತಿರುವ ಹಾಲಿನ ದರವನ್ನೂ ಹೆಚ್ಚಳ ಮಾಡಲಾಗಿದೆ. ಹೈನುಗಾರಿಕೆ ಮೂಲಕ ಹಾಲು ಉತ್ಪಾದನೆಗೆ ಪೊ್ರೀತ್ಸಾಹ ನೀಡಲಾಗುತ್ತಿದೆ ಎಂದರು.
ಇದೇ ಸಂದರ್ಭದಲ್ಲಿ ಬಡಗಬೆಟ್ಟು ಕ್ರೆಡಿಟ್ ಕೋಆಪರೇಟಿವ್ ಸೊಸೈಟಿಯ ಪ್ರಧಾನ ವ್ಯವಸ್ಥಾಪಕ ಜಯಕರ ಶೆಟ್ಟಿ ಇಂದ್ರಾಳಿ, ಉಡುಪಿ ಹಾಲು ಉತ್ಪಾದಕರ ಸಂಘಗಳ ನೌಕರರ ಸಂಘದ ಅಧ್ಯಕ್ಷ ಓಂ ಪ್ರಕಾಶ್ ಕೆಮ್ಮಣ್ಣು, ಇನ್ನಂಜೆ ಹಾಲು ಉತ್ಪಾದಕರ ಸಂಘದ ಕಾರ್ಯನಿರ್ವಹಣಾಧಿಕಾರಿ ಸುಬ್ರಹ್ಮಣ್ಯ ಎನ್.ಭಟ್, 82ನೆ ಕುದಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಮುಖ್ಯಕಾರ್ಯ ನಿರ್ವಹಣಾಧಿಕಾರಿ ಆಶಾ ಡಿ.ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.
ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷ ರಾಘು ಉಳಿಯಾರಗೋಳಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕರ್ನಾಟಕ ಹಾಲು ಮಹಾಮಂಡಳಿಯ ನಿರ್ದೇಶಕ ಕಾಪು ದಿವಾಕರ ಶೆಟ್ಟಿ, ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ಸಂಘದ ಬ್ಯಾಂಕಿಂಗ್ ವಿಭಾಗದ ಅಧ್ಯಕ್ಷ ಓಂಪ್ರಕಾಶ್ ಕೆಮ್ಮಣ್ಣು, ದ.ಕ. ಜಿಲ್ಲಾ ನೌಕರರ ಒಕ್ಕೂಟದ ಅಧ್ಯಕ್ಷ ಶೇಖರ ತಾಕೊಡೆ ಉಪಸ್ಥಿತರಿದ್ದರು.
ಶಿರ್ವ ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿ ಪ್ರಸನ್ನ ಶಿರ್ವ ಸ್ವಾಗತಿಸಿದರು. ಅವರಾಲು ಮಟ್ಟು ಸಂಘದ ಕಾರ್ಯದರ್ಶಿ ಅಕ್ಷತಾ ಕಾರ್ಯಕ್ರಮ ನಿರೂಪಿಸಿದರು.