ರಾಜ್ಯದಲ್ಲಿ ಇರುವುದು ಬಿಜೆಪಿ ಸರ್ಕಾರ ಅಲ್ಲ, ನ್ಯಾಷನಲ್ ಸರ್ಕಾರ: ಎಚ್.ವಿಶ್ವನಾಥ್

Update: 2021-03-20 15:58 GMT

ಮೈಸೂರು,ಮಾ.20: ರಾಜ್ಯದಲ್ಲಿ ಇರುವುದು ಬಿಜೆಪಿ ಸರ್ಕಾರ ಅಲ್ಲ. ಅದು ನ್ಯಾಷನಲ್ ಸರ್ಕಾರ ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಸ್ವಪಕ್ಷದ ಆಡಳಿತವನ್ನೇ ಟೀಕಿಸಿದರು.

ನಗರದಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಎಇದ ಅವರು, ಸಿದ್ದರಾಮಯ್ಯ-ಕುಮಾರಸ್ವಾಮಿ ಪರಸ್ಪರರನ್ನು ರಕ್ಷಣೆ ಮಾಡಿಕೊಳ್ಳುತ್ತಿದ್ದಾರೆ. ಇವರಿಬ್ಬರೂ ಸೇರಿಕೊಂಡು ಯಡಿಯೂರಪ್ಪ ಅವರನ್ನು ರಕ್ಷಿಸುತ್ತಿದ್ದಾರೆ. ಇದು ಒಬ್ಬರಿಗೊಬ್ಬರು ಹೊಂದಾಣಿಕೆ ಮಾಡಿಕೊಳ್ಳುವ ರಾಜಕಾರಣ ಎಂದು ವ್ಯಂಗ್ಯವಾಡಿದರು.

ಭ್ರಷ್ಟಾಚಾರಕ್ಕೆ ಲಸಿಕೆ ಯಾವಾಗ ಎಂಬ ಸಿದ್ದರಾಮಯ್ಯ ಟ್ವೀಟ್ ಗೆ ತಿರುಗೇಟು ನೀಡಿದ ಅವರು, ಇದ್ದ ಲೋಕಾಯುಕ್ತ ಎಂಬ ಲಸಿಕೆಯನ್ನು ನಾಶಮಾಡಿದರು ಯಾರು? ನಿಮ್ಮ ಅರ್ಕಾವತಿ ಭ್ರಷ್ಟಾಚಾರ ಮುಚ್ಚಿಕೊಳ್ಳಲು ಲೋಕಾಯುಕ್ತಕ್ಕೆ ಬಾಗಿಲು ಹಾಕಿದಿರಿ.‌ ಜನರೇನು ದಡ್ಡರು ಎಂದುಕೊಂಡಿದ್ದೀರ ಎಂದು ಹರಿಹಾಯ್ದರು.

ಸಿದ್ದರಾಮಯ್ಯ ಮತ್ತು ತಂಡದವರು ಬ್ರಿಟಿಷರಿದ್ದಂತೆ. ವಲಸಿಗರಾಗಿ ಬಂದು ಮೂಲ ಕಾಂಗ್ರೆಸ್ಸಿಗರನ್ನು ಓಡಿಸುತ್ತಿದ್ದಾರೆ. ರೋಷನ್ ಬೇಗ್ ಆದಿಯಾಗಿ ಅಲ್ಪಸಂಖ್ಯಾತರನ್ನು ತುಳಿದರು. ಸಿದ್ದರಾಮಯ್ಯರನ್ನು ಯಾರು ಪ್ರಶ್ನೆ ಮಾಡುವಂತಿಲ್ಲ, ಮೈಸೂರು ಕಾಂಗ್ರೆಸ್ ನಲ್ಲಿ ನಡೆಯತ್ತಿರುವ ಬೆಳವಣಿಗೆ ಕಾಂಗ್ರೆಸನ್ನೇ ಮುಗಿಸುವಂತೆ ಕಾಣುತ್ತಿದೆ ಎಂದು ಕಿಡಿಕಾರಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News