×
Ad

ರಾಜ್ಯದ ಕೋವಿಡ್ ಪ್ರಕರಣಗಳಲ್ಲಿ ಮತ್ತೆ ಹೆಚ್ಚಳ: ಇಂದು 1,798 ಪಾಸಿಟಿವ್, 7 ಮಂದಿ ಸಾವು

Update: 2021-03-20 22:02 IST

ಬೆಂಗಳೂರು, ಮಾ. 20: ರಾಜ್ಯದಲ್ಲಿ ಶನಿವಾರ 1,798 ಹೊಸ ಕೊರೋನ ಪ್ರಕರಣಗಳು ದೃಢವಾಗಿವೆ. ರಾಜಧಾನಿ ಬೆಂಗಳೂರು ನಗರದಲ್ಲಿ ಒಟ್ಟು 1,186 ಮಂದಿಗೆ ಸೋಂಕು ಕಾಣಿಸಿಕೊಂಡಿದೆ. ರಾಜ್ಯದಲ್ಲಿ ಏಳು ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. 1,030 ಮಂದಿ ಗುಣಮುಖರಾಗಿದ್ದಾರೆ ಎಂದು ತಿಳಿಸಲಾಗಿದೆ.

ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 9,68,487ಕ್ಕೆ ತಲುಪಿದ್ದು, ಒಟ್ಟು ಸಾವಿನ ಸಂಖ್ಯೆ 12,432ಕ್ಕೆ ತಲುಪಿದ್ದು, ಒಟ್ಟು ಸಕ್ರಿಯ ಕೊರೋನ ಪ್ರಕರಣಗಳ ಸಂಖ್ಯೆ 12,828ಕ್ಕೆ ಏರಿಕೆಯಾಗಿದ್ದು, ಇವರೆಲ್ಲ ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಏಳು ಮಂದಿಯ ಬಲಿ: ಬೆಂಗಳೂರು ನಗರ-5 ಮಂದಿ, ಬೀದರ್-1 ಹಾಗೂ ವಿಜಯಪುರದಲ್ಲಿ-1 ಸೇರಿದಂತೆ ಒಟ್ಟು ಏಳು ಮಂದಿ ಕೋವಿಡ್-19 ಸೋಂಕುನಿಂದ ಸಾವನ್ನಪ್ಪಿದ್ದಾರೆ.

ಎಲ್ಲೆಲ್ಲಿ ಎಷ್ಟು: ರಾಜ್ಯದಲ್ಲಿ ಹೊಸದಾಗಿ 1,798 ಪ್ರಕರಣಗಳು ದೃಢವಾಗಿದ್ದು, ಆ ಪೈಕಿ ಬೆಂಗಳೂರು ನಗರದಲ್ಲಿ ಅತ್ಯಂತ ಹೆಚ್ಚು 1,186, ಉಡುಪಿ-66, ಕಲಬುರಗಿ-61, ಮೈಸೂರು-59, ದಕ್ಷಿಣ ಕನ್ನಡ-52, ಬೀದರ್-49, ಹಾಸನ-32, ವಿಜಯಪುರ-29 ಸೇರಿದಂತೆ ಒಟ್ಟು 1,798 ಹೊಸ ಪ್ರಕರಣಗಳು ಪತ್ತೆಯಾಗಿವೆ.

ರಾಜಧಾನಿಯಲ್ಲಿ ಆತಂಕ: ರಾಜ್ಯದ ರಾಜಧಾನಿಯಲ್ಲಿ ಬೆಂಗಳೂರಿನಲ್ಲಿ ಶನಿವಾರ ಒಟ್ಟು 1,186 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಐದು ಮಂದಿ ಸಾವನ್ನಪ್ಪಿದ್ದಾರೆ. ನಾಲ್ಕೈದು ದಿನಗಳಿಂದ ನಗರದಲ್ಲಿ ಸೋಂಕಿತರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿದ್ದು, ನಗರದ ಜನರಲ್ಲಿ ಕೋವಿಡ್ ಆತಂಕ ಮನೆಮಾಡಿದೆ.

ಬೆಂಗಳೂರು ನಗರದಲ್ಲಿ ಇಲ್ಲಿಯವರೆಗೆ ಒಟ್ಟು 4,16,633 ಕೊರೋನ ಸೋಂಕಿತರು ದೃಢಪಟ್ಟಿದ್ದು, 4,548 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. 4,03,040 ಜನರು ಕೋವಿಡ್-19 ಸೋಂಕಿನಿಂದ ಗುಣಮುಖರಾಗಿದ್ದಾರೆ. ಕೋವಿಡ್ ನಿಗದಿತ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳು ಹಾಗೂ ಆರೈಕೆ ಕೇಂದ್ರಗಳಲ್ಲಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News