ಸಿದ್ದರಾಮಯ್ಯರನ್ನು ಭೇಟಿ ಮಾಡಿದ ಪೈಲ್ವಾನ್ ಶಬ್ಬೀರ್ ಪಾಷ
Update: 2021-03-20 22:24 IST
ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಂತಾಮಣಿ ತಾಲೂಕಿನ ನಿಮ್ಮಕಾಯಲಹಳ್ಳಿ ಗ್ರಾಮದಲ್ಲಿರುವ ಹಝ್ರತ್ ಖಾಖಿ ಶಾ ಮೌಲಾ ದರ್ಗಾ ಆಡಳಿತ ಸಮಿತಿಗೆ ರಾಜ್ಯ ವಕ್ಫ್ ಬೋರ್ಡ್ ವತಿಯಿಂದ ಅಧ್ಯಕ್ಷರಾಗಿ ನೇಮಿಸಲ್ಪಟ್ಟಿರುವ ಪೈಲ್ವಾನ್ ಶಬ್ಬೀರ್ ಪಾಷ ಅವರು ಮಾಜಿ ಸಚಿವ ಝಮೀರ್ ಅಹ್ಮದ್ ಅವರೊಂದಿಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ ಕೃತಜ್ಞತೆಗಳನ್ನು ಸಲ್ಲಿಸಿದರು.