ಶಾರ್ಟ್ ಸರ್ಕ್ಯೂಟ್ : ಗುಜರಿ ಅಂಗಡಿಗೆ ಬೆಂಕಿ
Update: 2021-03-20 23:16 IST
ಉಳ್ಳಾಲ: ತೊಕ್ಕೊಟ್ಟು ಸಮೀಪದ ಕಲ್ಲಾಪುವಿನಲ್ಲಿ ಶಾರ್ಟ್ ಸರ್ಕ್ಯೂಟ್‍ನಿಂದ ಗುಜರಿ ಅಂಗಡಿಗೆ ಬೆಂಕಿ ಹೊತ್ತಿಕೊಂಡ ಘಟನೆ ಶನಿವಾರ ಮಧ್ಯಾಹ್ನ ನಡೆದಿದೆ.
ಕಲ್ಲಾಪು ಸಮೀಪ ಅನ್ವರ್ ಎಂಬವರು ನಡೆಸುತ್ತಿರುವ ಗುಜರಿ ಅಂಗಡಿಯಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಬೆಂಕಿ ಕಾಣಿಸಿಕೊಂಡಿದೆ.
ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.