ಕೇಂದ್ರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಸೋಮವಾರ 'ವಿಧಾನಸೌಧ ಚಲೋ'

Update: 2021-03-21 16:20 GMT

ಬೆಂಗಳೂರು, ಮಾ. 21: ಕೇಂದ್ರ ಸರಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರಾಜ್ಯದೆಲ್ಲೆಡೆ ರೈತ ನಾಯಕ ರಾಕೇಶ್ ಸಿಂಗ್ ಟಿಕಾಯತ್ ನೇತೃತ್ವದಲ್ಲಿ ರೈತ ಚಳುವಳಿ ನಡೆಯುತ್ತಿದ್ದು, ಇದರ ಭಾಗವಾಗಿ ನಾಳೆ(ಮಾ.22) ‘ವಿಧಾನಸೌಧ ಚಲೋ' ನಡೆಸುವ ಮೂಲಕ ರಾಜಧಾನಿ ಬೆಂಗಳೂರಿನಲ್ಲಿ ರೈತರ ಕಹಳೆ ಮೊಳಗಲಿದೆ.

ಸಂಯುಕ್ತ ಹೋರಾಟ-ಕರ್ನಾಟಕದ ನೇತೃತ್ವದಲ್ಲಿ ಇಂದು ಬೆಳಗ್ಗೆ 10 ಗಂಟೆಗೆ ನಗರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕೇಂದ್ರ ರೈಲ್ವೆ ನಿಲ್ದಾಣದಿಂದ ಸ್ವಾತಂತ್ರ್ಯ ಉದ್ಯಾನದವರೆಗೂ ಬೃಹತ್ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ. ಬಳಿಕ ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಹೊಸದಿಲ್ಲಿಯ ರೈತ ಹೋರಾಟದ ರೂವಾರಿಗಳಾದ ರಾಕೇಶ್ ಸಿಂಗ್ ಟಿಕಾಯತ್, ಡಾ.ದರ್ಶನ್ ಪಾಲ್, ಯುದ್ಧವೀರ್ ಸಿಂಗ್ ಭಾಗವಹಿಸಲಿದ್ದಾರೆ. ಜತೆಗೆ, ಸಾಣೇಹಳ್ಳಿ ಮಠದ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಸೇರಿದಂತೆ ಒಟ್ಟು 25 ಸಾವಿರ ಮಂದಿ ಸೇರುವ ನಿರೀಕ್ಷೆ ಇದೆ.

ಕೇಂದ್ರ ಮತ್ತು ರಾಜ್ಯ ಸರಕಾರಗಳ ರೈತ ವಿರೋಧಿ, ಕಾರ್ಮಿಕ ವಿರೋಧಿ ನೀತಿಗಳನ್ನು ವಿರೋಧಿಸಿ, ರೈತರು, ದಲಿತರು, ಕಾರ್ಮಿಕರು, ವಿದ್ಯಾರ್ಥಿ, ಯುವಜನ ಮತ್ತು ಮಹಿಳೆಯರ ಜ್ವಲಂತ ಬೇಡಿಕೆಗಳನ್ನು ಈಡೇರಿಸಬೇಕೆಂದು ರೈತ ಹೋರಾಟಗಾರರ ಆಗ್ರಹವಾಗಿದೆ. ಇನ್ನು, ಈಗಾಗಲೇ ಶಿವಮೊಗ್ಗ ಸೇರಿದಂತೆ ಹಲವು ಕಡೆಗಳಲ್ಲಿ ರಾಕೇಶ್ ಸಿಂಗ್ ಟಿಕಾಯತ್ ಅವರ ಅಧ್ಯಕ್ಷತೆಯಲ್ಲಿ ರೈತರ ಮಹಾಪಂಚಾಯತ್ ನಡೆದಿದ್ದು, ಬೆಂಗಳೂರಿನಲ್ಲೂ ಬೃಹತ್ ಹೋರಾಟ ನಡೆಸುವ ಮೂಲಕ ಕೇಂದ್ರ ಮತ್ತು ರಾಜ್ಯ ಸರಕಾರಗಳಿಗೆ ರೈತರು ತಮ್ಮ ಬೇಡಿಕೆಗಳ ಧ್ವನಿಯನ್ನು ಇನ್ನಷ್ಟು ಗಟ್ಟಿಗೊಳಿಸಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News