×
Ad

ಕೈಯಲ್ಲಿ ಕೋವಿಡ್ ನೆಗೆಟಿವ್ ವರದಿ: ವಿಮಾನ ಪ್ರಯಾಣಿಕರ ತಪಾಸಣೆ ವೇಳೆ ಪಾಸಿಟಿವ್!

Update: 2021-03-22 11:10 IST
ಸಾಂದರ್ಭಿಕ ಚಿತ್ರ

ಹೈದರಾಬಾದ್, ಮಾ.22: ಕೋವಿಡ್-19 ನೆಗೆಟಿವ್ ವರದಿಯೊಂದಿಗೆ ವಿಮಾನ ಪ್ರಮಾಣ ಮಾಡಿದ್ದ ಹಲವು ಮಂದಿ ಪ್ರಯಾಣಿಕರನ್ನು ಹೈದರಾಬಾದ್‌ನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರೋಗಲಕ್ಷಣ ಪತ್ತೆ ಪರೀಕ್ಷೆಗೆ ಒಳಪಡಿಸಿದಾಗ ಕೊರೋನ ಪಾಸಿಟಿವ್ ಇದ್ದ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ.

ನಿರಂತರವಾಗಿ ನೆಗೆಟಿವ್ ರಿಪೋರ್ಟ್ ಹೊಂದಿದ್ದ ಕೆಲ ಅಂತಾರಾಷ್ಟ್ರೀಯ ಪ್ರಯಾಣಿಕರನ್ನು ಹೈದರಾಬಾದ್‌ನಲ್ಲಿ ಪರೀಕ್ಷೆಗೆ ಗುರಿಪಡಿಸಿದಾಗ ಪಾಸಿಟಿವ್ ವರದಿ ಬಂದಿದೆ ಎಂದು ವಿಮಾನ ನಿಲ್ದಾಣದ ಮೂಲಗಳು ಹೇಳಿವೆ.

ಇಂಥ ಪ್ರಕರಣಗಳು ಪತ್ತೆಯಾಗಿರುವುದನ್ನು ದೃಢಪಡಿಸಿದ ಕೇಂದ್ರ ಆರೋಗ್ಯ ಸಚಿವಾಲಯ ಅಧಿಕಾರಿ ಅನುರಾಧಾ ಮೆದೋಜು, ಈ ಪಾಸಿಟಿವ್ ವರದಿಗಳನ್ನು ಕ್ವಾರಂಟೈನ್ ಮತ್ತು ಇತರ ಉದ್ದೇಶಗಳಿಗಾಗಿ ಸಂಬಂಧಪಟ್ಟ ರಾಜ್ಯ ಸರ್ಕಾರಗಳ ಜತೆ ಹಂಚಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ. "ಪ್ರಯಾಣಿಕರು ನೆಗೆಟಿವ್ ವರದಿ ಹೊಂದಿದ್ದರೂ, ವಿಮಾನ ನಿಲ್ದಾಣದಲ್ಲಿ ತಪಾಸಣೆ ನಡೆಸಿದಾಗ ಪಾಸಿಟಿವ್ ಇರುವ ಕೆಲ ಪ್ರಕರಣಗಳು ಪತ್ತೆಯಾಗಿವೆ" ಎಂದು ಅವರು ವಿವರಿಸಿದ್ದಾರೆ. ಆದರೆ ಅಂಥ ಎಷ್ಟು ಪ್ರಕರಣಗಳು ವರದಿಯಾಗಿವೆ ಎಂಬ ಬಗ್ಗೆ ತಕ್ಷಣಕ್ಕೆ ಮಾಹಿತಿ ಇಲ್ಲ ಎಂದು ಅವರು ಹೇಳಿದ್ದಾರೆ.

ಮಧ್ಯಪ್ರಾಚ್ಯ ಮತ್ತು ಬ್ರಿಟನ್‌ನಿಂದ ಆಗಮಿಸುವ ಪ್ರಯಾಣಿಕರಿಗೆ ಕೋವಿಡ್ ಪರೀಕ್ಷೆ ಕಡ್ಡಾಯವಾಗಿದ್ದು, ಅಮೆರಿಕ, ಸಿಂಗಾಪುರ ಮತ್ತು ಮಾಲ್ಡೀವ್ಸ್‌ನಿಂದ ಆಗಮಿಸುವ ಪ್ರಯಾಣಿಕರು 72 ಗಂಟೆಗಳ ಹಿಂದೆ ಪಡೆದ ಆರ್‌ಟಿ-ಪಿಸಿಆರ್ ವರದಿ ಹೊಂದಿದ್ದರೆ ಮನೆಗೆ ಹೋಗಲು ಅವಕಾಶ ನೀಡಲಾಗುತ್ತಿದೆ.
ಪ್ರಯಾಣಕ್ಕಾಗಿ ಇಂಥ ಕೆಲ ಪ್ರಯಾಣಿಕರು ನಕಲಿ ಪರೀಕಾ ವರದಿ ಪಡೆದಿರುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News