×
Ad

ತಲಪಾಡಿಯಲ್ಲಿ ಸ್ಕೂಟರ್ ಗೆ ಢಿಕ್ಕಿಯಾದ ಸರಕಾರಿ ಬಸ್: ಸವಾರ ಗಂಭೀರ

Update: 2021-03-22 13:40 IST

ಉಳ್ಳಾಲ, ಮಾ.22: ದ್ವಿಚಕ್ರ ವಾಹನಕ್ಕೆ ಸರಕಾರಿ ಬಸ್ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಗಂಭೀರ ಗಾಯಗೊಂಡ ಘಟನೆ ಸೋಮವಾರ ಬೆಳಗ್ಗೆ ತಲಪಾಡಿ ಜಂಕ್ಷನ್ ನಲ್ಲಿ ನಡೆದಿದೆ. ಈ ಭೀಕರ ರಸ್ತೆ ಅಪಘಾತದ ದೃಶ್ಯ ಸ್ಥಳೀಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಅಪಘಾತದಲ್ಲಿ ಗಾಯಗೊಂಡವರನ್ನು ಉದ್ಯಾವರ ನಿವಾಸಿ ತುಳಸಿ ಎಂದು ಗುರುತಿಸಲಾಗಿದೆ. ತುಳಸಿಯವರು ತಲಪಾಡಿಯಲ್ಲಿ ಟೈರ್‌ ಅಂಗಡಿಯೊಂದನ್ನು ನಡೆಸುತ್ತಿದ್ದು ಬೆಳಗ್ಗೆ ಅಂಗಡಿಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಇವರು ಹೆದ್ದಾರಿಯಲ್ಲಿ ಯು ಟರ್ನ್ ಪಡೆಯುತ್ತಿದ್ದ ಸಂದರ್ಭ ಮಂಗಳೂರಿನಿಂದ ಕಾಸರಗೋಡು ಕಡೆಗೆ ಸಂಚರಿಸುತ್ತಿದ್ದ ಸರಕಾರಿ ಬಸ್ ಢಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಸ್ಕೂಟರ್ ಬಸ್ಸಿನಡಿಗೆ ಸಿಲುಕಿ ನಜ್ಜುಗುಜ್ಜಾಗಿದೆ. ಈ ವೇಳೆ ಬಸ್ಸಿನಡಿಗೆ ಸಿಲುಕಿದ ತುಳಸಿ ಅವರ ಕಾಲುಗಳಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ವೇಗವಾಗಿದ್ದ ಬಸ್ ಶಾಲಾ ಬಸ್ಸೊಂದಕ್ಕೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸುವ ಭರದಲ್ಲಿ ತುಳಸಿ ಸಂಚರಿಸುತ್ತಿದ್ದ ಸ್ಕೂಟರ್ ಗೆ ಢಿಕ್ಕಿಯಾಗಿ ಡಿವೈಡರ್ ಏರಿತ್ತು.

ಈ ಬಗ್ಗೆ ನಾಗುರಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News