ಬಂಗಾಳ ಚುನಾವಣೆ: ತಾರಾ ಪ್ರಚಾರಕರ ಪಟ್ಟಿಯಲ್ಲಿ ಮನೀಷ್ ತಿವಾರಿಗೆ ಸ್ಥಾನ

Update: 2021-03-22 14:24 GMT

ಹೊಸದಿಲ್ಲಿ: ಮೂರನೇ ಹಂತದ ಪಶ್ಚಿಮಬಂಗಾಳ ಚುನಾವಣೆಗೆ ಕಾಂಗ್ರೆಸ್ ಪಕ್ಷ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಸೋಮವಾರ ಬಿಡುಗಡೆ ಮಾಡಿದೆ.

30 ನಾಯಕರ ಪಟ್ಟಿಯಲ್ಲಿ ಕಾಂಗ್ರೆಸ್ ನ ಪ್ರಮುಖ ನಾಯಕರಾದ ಸೋನಿಯಾ ಗಾಂಧಿ, ಮನಮೋಹನ್ ಸಿಂಗ್, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರಿದ್ದಾರೆ.

ಈ ಬಾರಿಯ ಪಟ್ಟಿಯಲ್ಲಿ ಪಂಜಾಬ್ ನ ಆನಂದ್ ಪುರ್ ಸಾಹಿಬ್ ಲೋಕಸಭಾ ಕ್ಷೇತ್ರದ ಸಂಸದ ಹಾಗೂ ಪಕ್ಷದ ವಿರುದ್ಧ ಬಂಡಾಯ ಸಾರಿದ್ದ ಜಿ-23 ನಾಯಕರೊಂದಿಗೆ ಗುರುತಿಸಿಕೊಂಡಿದ್ದ ಮನೀಷ್ ತಿವಾರಿಗೆ ಸ್ಥಾನ ನೀಡಲಾಗಿದೆ.

ಕಳೆದ ವರ್ಷ ಕಾಂಗ್ರೆಸ್ ನ 23 ಹಿರಿಯ ನಾಯಕರು ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಪತ್ರ ಬರೆದು ಪಕ್ಷವನ್ನು ಮುನ್ನಡೆಸುತ್ತಿರುವ ವಿಧಾನದ ಬಗ್ಗೆ ಪ್ರಶ್ನೆ ಎತ್ತಿದ್ದರು.

ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ತಾರಾ ಪ್ರಚಾರಕರ ಪಟ್ಟಿಯಲ್ಲಿ ಇತರ ಜಿ-23 ನಾಯಕರಾದ ಗುಲಾಮ್ ನಬಿ ಆಝಾದ್, ಆನಂದ್ ಶರ್ಮಾ ಹಾಗೂ ರಾಜ್ ಬಬ್ಬರ್ ಅವರಿಗೆ ಸ್ಥಾನ ನೀಡಲಾಗಿಲ್ಲ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News