×
Ad

​ಕಾಪು ಮಾರಿ ಪೂಜೆ: 2ದಿನ ಮದ್ಯ ಮರಾಟ ನಿಷೇಧ

Update: 2021-03-22 20:13 IST

ಉಡುಪಿ, ಮಾ. 22: ಜಿಲ್ಲೆಯ ಕಾಪು ತಾಲೂಕಿನ ಕಾಪು ಮೂರು ಮಾರಿಗುಡಿಗಳಲ್ಲಿ ಮಾರ್ಚ್ 23 ಮತ್ತು 24 ರಂದು ಸುಗ್ಗಿ ಮಾರಿ ಪೂಜೆ ನಡೆಯಲಿದ್ದು, ಜಿಲ್ಲೆ ಹಾಗೂ ಹೊರಜಿಲ್ಲೆಗಳ ಭಕ್ತಾದಿಗಳು ಭಾರೀ ಸಂಖ್ಯೆಯಲ್ಲಿ ಆಗಮಿಸುವ ನಿರೀಕ್ಷೆ ಇದೆ.

ಈ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಟಿಯಿಂದ , ಕಾಪು ಠಾಣಾ ವ್ಯಾಪ್ತಿಯ ಕಾಪು ಪಡು, ಮೂಳೂರು, ಮಜೂರು ಗ್ರಾಮಗಳ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಬಾರ್ ರೆಸ್ಟೋರೆಂಟ್ ಮತ್ತು ವೈನ್‌ಶಾಪ್‌ಗಳಲ್ಲಿ ಮದ್ಯ ಮಾರಾಟವನ್ನು ಮಾ.23ರ ಬೆಳಗ್ಗೆ 6 ರಿಂದ ಮಾ.24ರ ರಾತ್ರಿ 12 ಗಂಟೆಯವರೆಗೆ ಮುಚ್ಚಲು ಆದೇಶಿಸಿ, ಈ ಮೇಲ್ಕಂಡ ಗ್ರಾಮಗಳ ವ್ಯಾಪ್ತಿಯಲ್ಲಿ ಒಣದಿನ ಎಂದು ಘೋಷಿಸಿ, ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಜಿ. ಜಗದೀಶ್ ಆದೇಶ ಹೊರಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News